‘ಗೋಲ್ ಗುಪ್ಪಾ’ ಪ್ರಿಯರಿಗೆ ಬಿಗ್ ಶಾಕ್ : ಶೀಘ್ರವೇ ರಾಜ್ಯದಲ್ಲಿ ಬ್ಯಾನ್ ಮಾಡಲು ಚಿಂತನೆ.!‘ಗೋಲ್ ಗುಪ್ಪಾ’ ಪ್ರಿಯರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ರಾಜ್ಯದಲ್ಲಿ ಬ್ಯಾನ್ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಗೋಲ್ ಗಪ್ಪಾ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಬೆನ್ನಲ್ಲೇ ಕರ್ನಾಟಕ ಆಹಾರ ಹಾಗೂ ಗುಣಮಟ್ಟ ಇಲಾಖೆ ಎಚ್ಚೆತ್ತುಕೊಂಡಿದ್ದು, ಕ್ರಮಕ್ಕೆ ಮುಂದಾಗಿದೆ.
ಕಳೆದ 2 ಗೋಲ ಗಪ್ಪಾ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದ್ದು. ಸಂಗ್ರಹಿಸಿದ ಸ್ಯಾಂಪಲ್ಸ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದ್ದು, ಸದ್ಯದಲ್ಲೇ ವರದಿ ಬರಲಿದೆ. ಬಳಿಕ ಬ್ಯಾನ್ ಮಾಡುವ ಬಗ್ಗೆ ಚಿಂತನೆ ನಡೆಸಲಾಗುತ್ತದೆ ಎಂದು ಹೇಳಲಾಗಿದೆ.
ಇತ್ತೀಚೆಗೆ ಜಾರ್ಖಂಡ್ನ ಗರ್ವಾ ಜಿಲ್ಲೆಯಲ್ಲಿ ಗೋಲ್ಗಪ್ಪ ತಯಾರಿಸಲು ಹಿಟ್ಟನ್ನು ಬೆರೆಸುವ ವೇಳೆ ಇಬ್ಬರು ತಮ್ಮ ಕಾಲುಗಳಿಂದ ಹಿಟ್ಟು ತುಳಿಯುತ್ತಿರುವ ವಿಡಿಯೋ ವೈರಲ್ ಆಗಿದ್ದು ಅವರನ್ನು ಬಂಧಿಸಲಾಗಿದೆ. ಹಿಟ್ಟಿನ ರುಚಿಯನ್ನು ಹೆಚ್ಚಿಸಲು ನೀರಿಗೆ ಹಾರ್ಪಿಕ್ ಮತ್ತು ಯೂರಿಯಾ ಸೇರಿದಂತೆ ಹಾನಿಕಾರಕ ರಾಸಾಯನಿಕಗಳನ್ನು ಸೇರಿಸಿದ್ದನ್ನು ಅವರು ಒಪ್ಪಿಕೊಂಡಿದ್ದಾರೆ. ವೀಡಿಯೋದಿಂದ ಎಚ್ಚೆತ್ತ ಸ್ಥಳೀಯ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ಸ್ಥಳದಲ್ಲಿದ್ದ ವಸ್ತುಗಳನ್ನು ವಶಪಡಿಸಿಕೊಂಡಿದ್ದರು.