ಯಾದಗಿರಿ : ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರು, ಉದ್ಯಮಿಗಳು, ಖಾಸಗಿ ನೌಕರರಿಗೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ದಂಡ ವಿಧಿಸಿದೆ.
ಜಿಲ್ಲೆಯಲ್ಲಿ 405 ಎಎವೈ, ಬಿಪಿಎಲ್ 5,375 ಸೇರಿ 5,780 ಕಾರ್ಡ್ ದಾರರಿಗೆ ಬಿಪಿಎಲ್ ಕಾರ್ಡ್ ಅರ್ಹತೆ ಇಲ್ಲದಿದ್ದರೂ ಕಾರ್ಡ್ ಹೊಂದಿದ್ದರಿಂದ ದಂಡ ವಿಧಿಸಲಾಗಿದೆ. ಹಾಗೂ ಎಎವೈ, BPL ಬದಲಾಗಿ ಎಪಿಎಲ್ ಕಾರ್ಡ್ಗಳಾಗಿ ಪರಿವರ್ತಿಸಲಾಗಿದೆ. ಯಾದಗಿರಿ ತಾಲ್ಲೂಕಿನ ರಾಮಸಮುದ್ರ ಗ್ರಾಮದ ಪೊಲೀಸ್ ತಹಶೀಲ್ದಾರ್ ಗೆ ತಲಾ 8 ಸಾವಿರ ಹಾಗೂ ರೂ 6300 ದಂಡ ವಿಧಿಸಲಾಗಿದೆ.
ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ನಿಗಮಗಳು/ ಆದಾಯ ತೆರಿಗೆ ಸೇವಾ ತೆರಿಗೆ/ ವ್ಯಾಟ್/ ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳು ಬಿಪಿಎಲ್ ಕಾರ್ಡ್ ವ್ಯಾಪ್ತಿಗೆ ಬರುವುದಿಲ್ಲ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.