ಮೈಸೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಶಾಲೆಯ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ಬಾರಿಯೂ ಸೈಕಲ್ ವಿತರಣೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಸಾಧ್ಯವಿಲ್ಲ. ಎಸ್.ಸಿ. ಎಸ್ ಟಿ ಮಕ್ಕಳಿಗೆ ಮಾತ್ರ ಲ್ಯಾಪ್ ಟಾಪ್ ವಿತರಣೆಯಾಗಲಿದೆ. ಪ್ರತಿ ಮನೆಗೆ 2 ಸಾವಿರ ರೂ. ನೀಡುತ್ತಿರುವುದರಲ್ಲಿ ಉಳಿತಾಯ ಮಾಡಿ ಪೋಷಕರೆ ಸೈಕಲ್ ಹಾಗೂ ಲ್ಯಾಪ್ ಟ್ಯಾಪ್ ಕೊಡಿಸಬಹುದು ಎಂದರು.
ಶೀಘ್ರವೇ ನ್ಯಾಯಲಯದ ತೀರ್ಪು ಹೊರಬೀಳಲಿದ್ದು, 13,500 ಶಿಕ್ಷಕರನ್ನು ನೇಮಕ ಮಾಡಿಕೊಂಡು ಶಿಕ್ಷಕರ ಕೊರತೆ ನೀಗಿಸಲಾಗುವುದು. ರಾಜ್ಯಾದ್ಯಂತ 2 ಸಾವಿರ ಕೆಪಿಎಸ್ ಶಾಲೆ ಆರಂಭಿಸಲಾಗುವುದು. ಮುಂದಿನ ಶೈಕ್ಷಣಿಕ ವರ್ಷದ ವೇಳೆಗೆ 600 ಶಾಲೆ ತೆರೆಯಲಾಗುವುದು ಎಂದು ಹೇಳಿದ್ದಾರೆ.