ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಹಾಲಿನ ದರ ಹೆಚ್ಚಳದ ಬೆನ್ನಲ್ಲೇ ಹೋಟೆಲ್ ಗಳಲ್ಲಿ ಸಿಗುವ ಕಾಫಿ, ಟೀ ಬೆಲೆ ಕೂಡ ಹೆಚ್ಚಳವಾಗಲಿದೆ ಎನ್ನಲಾಗಿದೆ.
ಈಗಾಗಲೇ ಕಾಫಿಪುಡಿ, ಟೀಪುಡಿ ದರ ಕೂಡ ಜಾಸ್ತಿಯಾಗಿದೆ. ಅಲ್ಲದೇ ಸರ್ಕಾರ ನಂದಿನಿ ಹಾಲಿನ ದರವನ್ನು ಪ್ರತಿ.ಲೀ ಗೆ 2 ರೂ ನಷ್ಟು ಹೆಚ್ಚಳ ಮಾಡಿದೆ. ಆದ್ದರಿಂದ ಕಾಫಿ, ಟೀ ಬೆಲೆ ಹೆಚ್ಚಳ ಅನಿವಾರ್ಯ ಎಂದು ಹೋಟೆಲ್ ಮಾಲೀಕರು ಹೇಳುತ್ತಿದ್ದಾರೆ. ಈ ಬಗ್ಗೆ ಮಾಲೀಕರ ಸಂಘ ಯಾವ ತೀರ್ಮಾನ ಕೂಡ ಕೈಗೊಂಡಿಲ್ಲ, ಬೆಲೆ ಏರಿಕೆ ಆಯಾ ಹೋಟೆಲ್ ಮಾಲೀಕರಿಗೆ ಬಿಟ್ಟಿದ್ದು ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ಹೇಳಿದ್ದಾರೆ.
ಕೆಎಂಎಫ್ ನಂದಿನಿ ಹಾಲಿನ ದರ ಲೀ.ಗೆ 2.10 ರೂ ಹೆಚ್ಚಳ ಮಾಡಿದೆ. ನಾಳೆಯಿಂದಲೇ ಪರಿಷ್ಕ್ರತ ದರ ಜಾರಿಗೆ ಬರಲಿದೆ .ಪ್ರತಿ ಲೀಟರ್ ಹಾಲಿನ ದರವನ್ನ 2.10 ರೂ. ಹಾಗೂ ಅರ್ಧ ಲೀಟರ್ ಹಾಲಿನ ದರ 22 ರೂ. ನಿಂದ 24 ರೂ.ಗೆ ಹೆಚ್ಚಿಸಲಾಗಿದೆ.