ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್, ಆಗಸ್ಟ್ 1 ರ ಇಂದಿನಿಂದ ಹೋಟೆಲ್ ನ ತಿಂಡಿ ತಿನಿಸುಗಳ ಬೆಲೆ ಶೇ. 10 ಏರಿಕೆ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದು, ಈ ಮೂಲಕ ಗ್ರಾಹಕರಿಗೆ ಮತ್ತೆ ಶಾಕ್ ಎದುರಾಗಿದೆ.
ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿಸಿ ರಾವ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ವಿದ್ಯುತ್, ತರಕಾರಿ, ಅಕ್ಕಿ, ಬೇಳೆ ಕಾಳುಗಳ ಬೆಲೆಗಳು ಗಗನಕ್ಕೇರಿದ್ದು, ಹೊಟೇಲ್ ಉದ್ಯಮವನ್ನ ಸಂಕಷ್ಟಕ್ಕೆ ದೂಡಿದೆ ಇದರ ಜೊತೆ ವಿದ್ಯುತ್, ಹಾಲಿನ ದರ ಏರಿಕೆ ಬರೆ ಮಾಲೀಕರನ್ನ ಕಂಗೆಡಿಸಿದೆ.ಹೀಗಾಗಿ ನಷ್ಟ ಸರಿದೂಗಿಸಲು ಅನಿವಾರ್ಯವಾಗಿ ಇಂದಿನಿಂದ ಹೋಟೆಲ್ ಊಟ, ತಿಂಡಿ, ಟೀ,ಕಾಫಿ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ.
ಯಾವುದಕ್ಕೆ ಎಷ್ಟು ದರ ನಿಗದಿಯಾಗಲಿದೆ ಎಂಬುದನ್ನು ನೋಡುವುದಾದರೆ ..?
ಬಿಸಿ ಬೇಳೆಬಾತ್ 45 ರಿಂದ 55 ರೂ, ರೈಸ್ ಪೂರಿ 45 ರಿಂದ 50 ರೂ. ಮಸಾಲೆ ದೋಸೆ 60 ರೂ., ಉದ್ದಿನ ವಡೆ 15 ರೂ. ಪೂಳಿಯೊಗರೆ 40-50 ರೂ., ಇಡ್ಲಿ ವಡೆ 30 ರಿಂದ 50 ರೂ.ವರೆಗೆ, ಟಿ ಮತ್ತು ಕಾಫಿ 12 ರಿಂದ 15 ರೂ. ಬಾದಾಮಿ ಹಾಲು 18 ರೂಗೆ ಏರಿಕೆ ಮಾಡಲಾಗುತ್ತದೆ. ಕರ್ಡ್ ರೈಸ್ 45-55 ರೂಗೆ ಏರಿಕೆಯಾಗಲಿದೆ.
ಅನ್ನಸಾಂಬಾರ್ 50 ರೂ. ನಿಂದ 60 ಕ್ಕೆ ಏರಿಸಲಾಗಿದೆ. ಫುಲ್ ಮೀಲ್ಸ್ ಬೆಲೆ 50 ರಿಂದ 70 ರೂ. ಏರಿಕೆ ಮಾಡಲಾಗಿದೆ. ಕಾಫಿ ಹಾಗೂ ಟೀ ಬೆಲೆ 3 ರೂಪಾಯಿ ಹೆಚ್ಚಳವಾಗಲಿದೆ, ತಿಂಡಿ ತಿನಿಸುಗಳ ಬೆಲೆ 5ರಿಂದ 10 ರೂಪಾಯಿಗಳಷ್ಟು ಏರಿಕೆಯಾಗಲಿದೆ. ರೈಸ್ ಬಾತ್ 40 ರಿಂದ 45 ರೂ ಗೆ ಹೆಚ್ಚಳ, ಇಡ್ಲಿ (2 ಕ್ಕೆ) 40-50. ಸೆಟ್ ದೋಸೆ 60-65, ಬೆಣ್ಣೆ ಮಸಾಲೆ ದೋಸೆ 70-80 ರೂಗೆ ಏರಿಕೆಯಾಗಲಿದೆ.