ಬೆಂಗಳೂರು : ಅನರ್ಹ, ಅಕ್ರಮ ಬಿಪಿಎಲ್ ಕಾರ್ಡ್’ದಾರರಿಗೆ ಬಿಗ್ ಶಾಕ್ ಎದುರಾಗಿದ್ದು, ಶೀಘ್ರವೇ ಎಪಿಎಲ್ ಕಾರ್ಡ್ ಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯಕಾಂಗ್ರೆಸ್ ಸರ್ಕಾರ ಇದೀಗ ಅನರ್ಹ ಬಿಪಿಎಲ್ ಕಾರ್ಡುದಾರರಿಗೆ ಶಾಕ್ ನೀಡಲು ಮುಂದಾಗಿದ್ದು, ಅನರ್ಹ ಬಿಪಿಎಲ್ ಕಾರ್ಡ್ ಗಳನ್ನ ಎಪಿಎಲ್ ಕಾರ್ಡ್ ಆಗಿ ವರ್ಗಾವಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ಶೇ.80ರಷ್ಟು ಕುಟುಂಬಗಳು ಬಿಪಿಎಲ್ ಕಾರ್ಡ್ ಹೊಂದಿದ್ದಾರೆ.. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವುದು ತಿಳಿದಿದೆ. ಇಂತಹ ಅನರ್ಹ ಬಿಪಿಎಲ್ ಕಾರ್ಡುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಹೆಚ್ ಮುನಿಯಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ 10,97,621 ಅಕ್ರಮ ಬಿಪಿಎಲ್ ಕಾರ್ಡ್ ಪತ್ತೆಯಾಗಿದೆ.