ನವದೆಹಲಿ : ಕಾವೇರಿ ನದಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಶಾಕ್ ಎದುರಾಗಿದೆ. ಹೌದು, ಕರ್ನಾಟಕಕ್ಕೆ CWMA ಬಿಗ್ ಶಾಕ್ ನೀಡಿದ್ದು,ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ.
ಕಾವೇರಿ ನೀರಿಗಾಗಿ ರಾಜ್ಯದಲ್ಲಿ ಭಾರಿ ಹೋರಾಟ ನಡೆದಿತ್ತು. ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ರೈತರು, ಹೋರಾಟಗಾರರು ಪ್ರತಿಭಟನೆ ನಡೆಸಿದ್ದರು. ಬಿರು ಬೇಸಿಗೆಯಲ್ಲೂ ತಮಿಳುನಾಡಿಗೆ ನೀರು ಹರಿಸುವಂತೆ ನಿರ್ದೇಶನ ನೀಡುತ್ತಲೇ ಬಂದಿತ್ತು.