ಬೆಂಗಳೂರು : ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಇನ್ನೊಂದು ವಾರದಲ್ಲಿ ಮದ್ಯದ ದರ ಹೆಚ್ಚಳವಾಗುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಅಬಕಾರಿ ಸುಂಕ ಹೆಚ್ಚಳ ಮಾಡುವುದಾಗಿ ಹೇಳಿದ್ದರು. ಅದರಂತೆ ಇನ್ನೊಂದು ವಾರದಲ್ಲಿ ಮದ್ಯದ ಬೆಲೆಯಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಅಬಕಾರಿ ಸುಂಕ ಶೇ. 20 ರಷ್ಟು ಹೆಚ್ಚಳ ಮಾಡಲಾಗುತ್ತಿದ್ದು, ಇದರಿಂದ ಮದ್ಯದ ಬೆಲೆ ದುಬಾರಿಯಾಗಲಿದೆ.
ಅಬಕಾರಿ ಇಲಾಖೆಯು ಈಗಾಗಲೇ ಹೊಸ ಮದ್ಯದ ದರ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದು, ಬಿಯರ್ ಗಳ ಮೇಲೆ ಹೆಚ್ಚುವರಿಯಾಗಿ 10 ಪರ್ಸೆಂಟ್ ಸುಂಕ ವಿಧಿಸಲಾಗುತ್ತಿದೆ. ಕನಿಷ್ಟ 20 ರೂ.ನಿಂದ 30 ರೂ.ವರೆಗೆ ಹೆಚ್ಚಳ ಮಾಡಲಾಗುತ್ತದೆ. ಬ್ರಾಂಡೆಡ್ ಮದ್ಯದ ಬೆಲೆ 400 ರೂ.ನಿಂದ900 ರೂ.ವರೆಗೆ ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.