ಡಿಜಿಟಲ್ ಡೆಸ್ಕ್ : ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ಶಾಕ್ ಎದುರಾಗಿದ್ದು, ಇಮ್ರಾನ್ ಖಾನ್ ಅವರ ‘ಪಿಟಿಐ’ ಪಕ್ಷ ನಿಷೇಧಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿದೆ.
ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷವನ್ನು ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವರು ಸೋಮವಾರ ಪ್ರಕಟಿಸಿದ್ದಾರೆ.
ಪಾಕಿಸ್ತಾನದ ಮಾಹಿತಿ ಮತ್ತು ಪ್ರಸಾರ ಸಚಿವ ಅತುಲ್ಲಾ ತರಾರ್ ಪತ್ರಿಕಾಗೋಷ್ಠಿಯಲ್ಲಿ ಪಿಟಿಐ ಅನ್ನು ನಿಷೇಧಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಮತ್ತು ಸರ್ಕಾರವು ಈ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗೆ ಉಲ್ಲೇಖಿಸಲಿದೆ ಎಂದು ಘೋಷಿಸಿದರು ಎಂದು ಪಾಕಿಸ್ತಾನ ಮಾಧ್ಯಮಗಳು ವರದಿ ಮಾಡಿವೆ.