ಬೆಂಗಳೂರು : ಖಾಸಗಿ ಶಾಲಾ ಮಕ್ಕಳ ಪೋಷಕರಿಗೆ ಬಿಗ್ ಶಾಕ್, ಖಾಸಗಿ ಶಾಲೆಗಳಲ್ಲಿ ಪಠ್ಯಪುಸ್ತಕಗಳ ದರವನ್ನು ಶೇ. 29 ರಿಂದ 35 ರಷ್ಟು ಹೆಚ್ಚಳ ಮಾಡಲಾಗಿದೆ.
ರಾಜ್ಯ ಸರ್ಕಾರವು ಅನುದಾನ ರಹಿತ ಶಾಲೆಗಳಿಗೆ ವಿತರಿಸುವ ಪಠ್ಯಪುಸ್ತಕಗಳಿಗೆ ಶೇ. 29 ರಿಂದ 35 ರಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ದರದಲ್ಲಿ ಪಠ್ಯಪುಸ್ತಕಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ಮೂಲಕ ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಿದ ಪೋಷಕರಿಗೆ ಮತ್ತೊಂದು ಹೊರೆಯಾಗಿ ಪರಿಣಮಿಸಿದೆ.
ರಾಜ್ಯ ಪಠ್ಯಪುಸ್ತಕ ಸಂಸ್ಥೆ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಿಗೆ ಪಠ್ಯಪುಸ್ತಕಗಳ ವಿತರಣೆ ನೀಡುವ ಜವಾಬ್ದಾರಿ ಹೊತ್ತಿದ್ದು, ಒಮ್ಮೆ ಬೆಲೆ ನಿಗದಿ ಪಡಿಸಿದ ಮೇಲೆ ವಿತರಣೆ ಮಾಡುತ್ತದೆ. ಈ ಬಾರಿ ಪಠ್ಯಪುಸ್ತಕಗಳಿಗೆ ಶೇ. 29 ರಿಂದ 35 ರಷ್ಟು ಏರಿಕೆ ಮಾಡಿರುವುದು ಖಾಸಗಿ ಶಾಲೆ ಪೋಷಕರಿಗೆ ಬಿಗ್ ಶಾಕ್ ಎದುರಾಗಿದೆ.
ರಾಜ್ಯ ಪಠ್ಯಕ್ರಮ ಬೋಧನೆ ಮಾಡುವ ಖಾಸಗಿ ಶಾಲೆ ಮತ್ತು ಪಿಯು ಕಾಲೇಜುಗಳ ಮಕ್ಕಳಿಗೆ ಸರ್ಕಾರದಿಂದ ಪಠ್ಯಪುಸ್ತಕ ಪೂರೈಕೆ ಮಾಡಲಿದ್ದು, ಈ ಪುಸ್ತಕಗಳ ಬೆಲೆ ಮುಂದಿನ ಶೈಕ್ಷಣಿಕ ವರ್ಷದಿಂದ ಶೇಕಡ 35ರಷ್ಟು ಹೆಚ್ಚಳ ಆಗಲಿದೆ. ಶಿಕ್ಷಣ ಇಲಾಖೆ ವತಿಯಿಂದ ರಾಜ್ಯ ಪಠ್ಯಕ್ರಮದ ಪುಸ್ತಕಗಳನ್ನು ಅಗತ್ಯಕ್ಕೆ ಅನುಗುಣವಾಗಿ ಮುದ್ರಣ ಮಾಡಿ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆ. ಪಿಯು ಕಾಲೇಜುಗಳಿಗೆ ಪೂರೈಕೆ ಮಾಡಲಾಗುತ್ತದೆ.