alex Certify ರಾಜ್ಯದ ʻSSLCʼ ವಿದ್ಯಾರ್ಥಿಗಳಿಗೆ ಬಿಗ್‌ಶಾಕ್‌ : ‘ಪೂರ್ವ ಸಿದ್ಧತಾ’ ಪರೀಕ್ಷೆಗೆ 50 ರೂ. ಶುಲ್ಕ ಪಾವತಿಗೆ ಸೂಚನೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ʻSSLCʼ ವಿದ್ಯಾರ್ಥಿಗಳಿಗೆ ಬಿಗ್‌ಶಾಕ್‌ : ‘ಪೂರ್ವ ಸಿದ್ಧತಾ’ ಪರೀಕ್ಷೆಗೆ 50 ರೂ. ಶುಲ್ಕ ಪಾವತಿಗೆ ಸೂಚನೆ!

ಬೆಂಗಳೂರು : 2023-24ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.

ಈ ಪರೀಕ್ಷೆ ಸಂಬಂಧ ಪ್ರತಿ ವಿದ್ಯಾರ್ಥಿಯಿಂದ ರೂ.50/-ಗಳನ್ನು ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರು ಸಂಗ್ರಹಿಸಿ ಜಿಲ್ಲಾ ಉಪನಿರ್ದೇಶಕರು [ಆಡಳಿತ] ರವರ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಕ್ರಮವಹಿಸುವುದು. ಈ ಬಗ್ಗೆ ಉಲ್ಲೇಖದಂತೆ ಸರ್ಕಾರದಿಂದ ಅನುಮೋದನೆ ಪಡೆಯಲಾಗಿರುತ್ತದೆ. ಸದರಿ ಪರೀಕ್ಷಾ ಖರ್ಚು ವೆಚ್ಚಗಳ ಕುರಿತು ಲೆಕ್ಕಪತ್ರ ನಿರ್ವಹಿಸಿ ತಪಾಸಣಾ ಸಮಯದಲ್ಲಿ ಜಿಲ್ಲಾ ಉಪನಿರ್ದೇಶಕರು ಹಾಜರುಪಡಿಸುವಂತೆ ಸೂಚನೆ ನೀಡಲಾಗಿದೆ.

2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆಯನ್ನು ದಿನಾಂಕ:26.02.2024 ರಿಂದ 02.03.2024 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ.ಪೂರ್ವ ಸಿದ್ಧತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಿ ಜಿಲ್ಲಾ ಉಪನಿರ್ದೇಶಕರು [ಆಡಳಿತ]ರವರ ಲಾಗಿನ್‌ಗೆ ಲಭ್ಯಗೊಳಿಸಲಾಗುವುದು. ಸದರಿ ಪ್ರಶ್ನೆಪತ್ರಿಕೆಗಳನ್ನು ಜಿಲ್ಲಾ ಉಪನಿರ್ದೇಶಕರು(ಆಡಳಿತ)ರವರ ಹಂತದಲ್ಲಿ ಮುದ್ರಿಸಿ ಸಂಬಂಧಿಸಿದ ಪ್ರೌಢ ಶಾಲೆಗಳಿಗೆ ತಲುಪಿಸಿ ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಲಾಗಿದೆ.

ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ದಿಕ್ಕೂಚಿಯಾಗಿರುತ್ತದೆ. ಆದ್ದರಿಂದ ಪೂರ್ವಸಿದ್ಧತಾ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಯನ್ನು ನಡೆಸುವ ರೀತಿಯಲ್ಲಿಯೇ ಶಿಸ್ತುಬದ್ಧವಾಗಿ, ಹಾಗೂ ಪಾರದರ್ಶಕವಾಗಿ ನಡೆಸಲು, ಜಿಲ್ಲಾ ಉಪನಿರ್ದೇಶಕರು (ಆಡಳಿತ)ರವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವಂತೆ ತಿಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...