ಬೆಂಗಳೂರು : ರಾಜ್ಯದ ‘ಪದವಿ’ ವಿದ್ಯಾರ್ಥಿಗಳಿಗೆ ಸರ್ಕಾರ ಬಿಗ್ ಶಾಕ್ ನೀಡಿದ್ದು, ಕೋರ್ಸ್ ಗಳ ಶುಲ್ಕ ಶೇ.10 % ಏರಿಕೆ ಮಾಡಿದೆ.
ಹೌದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್ ಗಳ ಶುಲ್ಕ 10 % ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ. ಈ ಮೂಲಕ ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಮತ್ತಷ್ಟು ಹೊರೆಯಾಗಲಿದೆ.
ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಕೋರ್ಟ್ ಗಳ ಶುಲ್ಕ ಹೆಚ್ಚಳ ಮಾಡಲು ಸೂಚನೆ ನೀಡಿದ್ದು,
ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ 10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಈಗಾಗಲೇ ಈ ಪರಿಷ್ಕೃತ ಶುಲ್ಕ ಪಟ್ಟಿಯನ್ನ ಯೂನಿವರ್ಸಿಟಿಗಳಿಗೆ ನೀಡಿ ಸರ್ಕಾರ ಸೂಚನೆ ನೀಡಿದೆ. ವಿಶ್ವವಿದ್ಯಾಲಯದಲ್ಲಿ ಆದಾಯದ ಕೊರತೆ ಹಿನ್ನೆಲೆ ಸರ್ಕಾರ ಶುಲ್ಕ ಹೆಚ್ಚಳ ಮಾಡುವ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.