ಬೆಂಗಳೂರಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಬಿಬಿಎಂಪಿಯಿಂದ ಮತ್ತೆ ತೆರವು ಕಾರ್ಯಾಚರಣೆ ಆರಂಭವಾಗಿದೆ.
ಬೆಂಗಳೂರಿನ ಹಲಸೂರಿನ ಬಜಾಜ್ ಸ್ಟ್ರೀಟ್ ನಲ್ಲಿ ಬಿಬಿಎಂಪಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿದೆ. ನಾವು ನಮ್ಮ ಅಪ್ಪ-ಅಜ್ಜನ ಕಾಲದಿಂದಲೂ ಈ ರಸ್ತೆಗಳಲ್ಲಿ ವ್ಯಾಪಾರ ಮಾಡುತ್ತಿದ್ದೇವೆ..ಈಗ ನಮ್ಮನ್ನು ಏಕಾಏಕಿ ಖಾಲಿ ಮಾಡಿಸಿದ್ರೆ ನಾವು ಏನು ಮಾಡಬೇಕು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮಾರ್ಷಲ್ ಗಳು 200 ಕ್ಕೂ ಹೆಚ್ಚು ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿದ್ದಾರೆ. ಮೂರು ತಿಂಗಳ ಹಿಂದೆ ತೆರವು ಕಾರ್ಯಾಚರಣೆಗೆ ಸಂಬಂಧಿಸಿದಂತೆ ಬಿಬಿಎಂಪಿ ನೋಟಿಸ್ ನೀಡಿತ್ತು. ಆದರೆ, ಬಿಬಿಎಂಪಿ ಮಾರ್ಷಲ್ಗಳು ಇತ್ತೀಚೆಗೆ ಮಾರಾಟಗಾರರಿಗೆ ಸ್ಥಳದಿಂದ ತೆರವುಗೊಳಿಸುವಂತೆ ಮಾಹಿತಿ ನೀಡಿದರು. ಬೀದಿ ಬದಿ ವ್ಯಾಪಾರಿಗಳಿಗೆ ತಮ್ಮ ವ್ಯವಹಾರವನ್ನು ನಡೆಸಲು ಯಾವುದೇ ಪರ್ಯಾಯ ಪ್ರದೇಶಗಳನ್ನು ನಿಗದಿಪಡಿಸಲಾಗಿಲ್ಲ.