ಬೆಂಗಳೂರು : ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನಾ ಪ್ರಮಾಣ ಕಡಿಮೆಯಾಗಿದ್ದು, ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿ ನಂತರ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯಾಗಿದೆ. ಹೀಗಾಗಿ ಜಲವಿದ್ಯುತ್ ಉತ್ಪಾದನಾ ಪ್ರಮಾಣ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಮೂಲಕ ವಿದ್ಯುತ್ ಪೂರೈಕೆಯನ್ನು ಮ್ಯಾನೇಜ್ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.ರಾಜ್ಯದ 11 ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ.. ಈ ಬಗ್ಗೆ ಅಂಕಿ ಅಂಶ ತರಿಸಿಕೊಂಡು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುತ್ತೇವೆ . ರಾಜ್ಯದಲ್ಲಿ ಜಲ ವಿದ್ಯುತ್ ಉತ್ಪಾದನೆ ಕಡಿಮೆಯಾಗಿದೆ, ಲೋಡ್ ಶೆಡ್ಡಿಂಗ್ ಅನಿವಾರ್ಯವಾಗಿದೆ ಎಂದರು.
ಇದೇ ವೇಳೆ ಮಾತನಾಡಿದ ಪರಮೇಶ್ವರ್ ಸ್ಥಳೀಯ ಕನ್ನಡಿಗರಿಗೆ ಎಚ್.ಎ.ಎಲ್ ನಲ್ಲಿ ಉದ್ಯೋಗ ಆದ್ಯತೆ ನೀಡುವಂತೆ ಸೂಚನೆ ನೀಡಿದ್ದೇನೆ ಎಂದರು. ಹೆಚ್.ಎ.ಎಲ್ ನೇಮಕಾತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು.ರಾಜ್ಯದಲ್ಲಿ ಇನ್ನೂ ಕೂಡ ಮಳೆಗಾಲ ಮುಗಿದಿಲ್ಲ, ಆದರೆ ಈಗಾಗಲೇ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಗೆ ಸರ್ಕಾರ ನಿರ್ಧರಿಸಿದೆ.