ಬೆಂಗಳೂರು : ರಾಜ್ಯದ ಜನತೆಗೆ ಬಿಗ್ ಶಾಕ್ ಎದುರಾಗಿದ್ದು, ಜನರು ದಾಖಲೆಯ ವಿದ್ಯುತ್ ಬಳಕೆ ಮಾಡುತ್ತಿದ್ದು, ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ.
ಹೌದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅತಿಹೆಚ್ಚು ವಿದ್ಯುತ್ ಬಳಕೆಯಾಗಿರುವುದು ತಿಳಿದು ಬಂದಿದೆ.ಇದು ಹೀಗೆ ಮುಂದುವರೆದರೆ ಬಿರು ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಜಾರಿಯಾಗುವ ಸಾಧ್ಯತೆಯಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ದಾಖಲೆಯ ವಿದ್ಯುತ್ ಬಳಕೆಯಾಗಿದ್ದು, ಈ ವರ್ಷ ಗರಿಷ್ಠ 8,128 ಮೆಗಾ ವ್ಯಾಟ್ ವಿದ್ಯುತ್ ಬಳಸುವ ಮೂಲಕ ಬೆಂಗಳೂರಿಗರು ಹೊಸ ದಾಖಲೆ ಸೃಷ್ಟಿಸಿದ್ದಾರೆ
ಬಿರು ಬಿಸಿಲಿನ ಹೊಡೆತದಿಂದ ತಪ್ಪಿಸಿಕೊಳ್ಳಲು ಜನರು ಫ್ಯಾನ್, ಏಸಿ ಕೂಲರ್ ಮೊರೆ ಹೋಗಿದ್ದು, ವಿದ್ಯುತ್ ಬಳಕೆ ಹೆಚ್ಚಾಗಿದೆ.
ರಾಜ್ಯದಲ್ಲಿ ತೀವ್ರ ಬರಗಾಲದಿಂದಾಗಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದರ ಜೊತೆಗೆ ವಿದ್ಯುತ್ ಬೇಡಿಕೆಯೂ ಹೆಚ್ಚಾಗಿದ್ದು, ಪೂರೈಕೆ ಸಾಧ್ಯವಾಗದೆ ಹಲವು ಕಡೆ ಲೋಡ್ ಶೆಡ್ಡಿಂಗ್ ಜಾರಿ ಮಾಡಲಾಗಿದೆ. ಪ್ರತಿದಿನ 200 ರಿಂದ 250 ದಶಲಕ್ಷ ಯೂನಿಟ್ ನಷ್ಟಿದ್ದ ಬೇಡಿಕೆ 323 ದಶ ಲಕ್ಷಕ್ಕೆ ಹೆಚ್ಚಳವಾಗಿದೆ. ವಿದ್ಯುತ್ ಪೂರೈಕೆ ಮಾಡಲು ಎಸ್ಕಾಂ ಗಳು ಪರದಾಟ ನಡೆಸಿವೆ. ಭಾರಿ ಬಿಸಿಲು, ಸೆಖೆ ಕಾರಣ ಜನ ಎಸಿ, ಫ್ಯಾನ್, ಕೂಲರ್ ಗಳ ಮೊರೆ ಹೋಗಿದ್ದಾರೆ. ಇದರಿಂದಾಗಿ ವಿದ್ಯುತ್ ಬೇಡಿಕೆ ಭಾರಿ ಹೆಚ್ಚಾಗಿದೆ. ಪೂರೈಕೆ ಸಾಧ್ಯವಾಗದೆ ಅನಧಿಕೃತವಾಗಿ ಲೋಡ್ ಶೆಡ್ಡಿಂಗ್ ಮಾಡಲಾಗುತ್ತಿದೆ.