ಬೆಂಗಳೂರು : ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಸಿಕ್ಕಿದ್ದೇ ಚಾನ್ಸ್ ಎಂದು ಖಾಸಗಿ ಬಸ್ ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ.
ಹಬ್ಬದ ಹಿನ್ನೆಲೆ ಸಾಲು ಸಾಲು ರಜೆ ಇರುವುದರಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಬೆಂಗಳೂರು ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆ ಟ್ರಾಫಿಕ್ ಜಾಮ್, ಜನಸಂದಣಿ ಹೆಚ್ಚಾಗಿದೆ.
ಹಲವು ಕಡೆ ಖಾಸಗಿ ಬಸ್ ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಕಡೆ ಆರ್ ಟಿ ಒ ಅಧಿಕಾರಿಗಳು ದಾಳಿ ನಡೆಸಿ ಖಾಸಗಿ ಬಸ್ ಗಳಿಗೆ ಶಾಕ್ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಹಲವು ಕಡೆ ಆರ್ಟಿಒ ಅಧಿಕಾರಿಗಳ ವಿಶೇಷ ತಂಡ ಖಾಸಗಿ ಬಸ್ಗಳ ಮೇಲೆ ದಾಳಿ ನಡೆಸಿ ದಂಡ ವಿಧಿಸಿದೆ. ಮನಸ್ಸಿಗೆ ಬಂದ ಹಾಗೆ ಹಣ ಪಡೆಯುತ್ತಿದ್ದ ಹಾಗೂ ಹೆಚ್ಚಿನ ಜನರನ್ನು ತುಂಬಿಕೊಂಡು ಹೋಗುತ್ತಿದ್ದ ಬಸ್ ಗಳಿಗೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.