ಬೆಂಗಳೂರು : ಗಣೇಶ ಹಬ್ಬಕ್ಕೆ ಊರಿಗೆ ಹೊರಟವರಿಗೆ ಬಿಗ್ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ಹೆಚ್ವಳವಾಗಿದೆ.
ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನ ಊರಿಗೆ ತೆರಳುತ್ತಿದ್ದು, ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಗಳು ಜನರಿಂದ ಹೆಚ್ಚಿನ ದರ ವಸೂಲಿ ಮಾಡುತ್ತಿದೆ. ಆರ್ ಟಿ ಒ ಆದೇಶಕ್ಕೂ ಕ್ಯಾರೇ ಎನ್ನದೇ ಖಾಸಗಿ ಬಸ್ ಗಳು ಹೆಚ್ಚಿನ ದರ ವಸೂಲಿ ಮಾಡುತ್ತಿದೆ.
ಹಬ್ಬದ ಹಿನ್ನೆಲೆಯಲ್ಲಿ ದುಬಾರಿ ಪ್ರಯಾಣದರ ವಸೂಲಿ ಮಾಡುವ ಖಾಸಗಿ ಬಸ್ ಗಳ ವಿರುದ್ಧ ಆರ್ ಟಿ ಒ ಕ್ರಮ ಕೈಗೊಂಡಿದೆ. ಆರ್ ಟಿ ಒ ಆದೇಶಕ್ಕೂ ಕ್ಯಾರೇ ಎನ್ನದೇ ಖಾಸಗಿ ಬಸ್ ಗಳು ಹೆಚ್ಚಿನ ದರ ವಸೂಲಿ ಮಾಡುತ್ತಿದೆ. ಟಿಕೆಟ್ ದರ ಸುಲಿಗೆಗೆ ಕಡಿವಾಣ ಹಾಕಲು ಇದೀಗ ಕರ್ನಾಕದಾದ್ಯಂತ ಇಂದು ಮತ್ತು ನಾಳೆ ಆರ್ಟಿಓ ಕಾರ್ಯಾಚರಣೆಗೆ ಮುಂದಾಗಿದೆ.