ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ತಿದ್ದುಪಡಿ ಮಾಡಲು ಅನುಮೋದನೆ ನೀಡಿದೆ.
ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರವು, ಪಡಿತರ ಚೀಟಿಯಲ್ಲಿನ ಫಲಾನುಭವಿಗಳ ಮಾಹಿತಿಯ ತಿದ್ದುಪಡಿ ಹಾಗೂ ಹೆಚ್ಚುವರಿಗೆ ಫಲಾನುಭವಿಗಳ ಹೆಸರನ್ನು ಸೇರ್ಪಡೆ ಮಾಡಲು ಅನುಮೋದನೆಯನ್ನು ನೀಡಲಾಗಿದೆ. ಮುಂದುವರೆದು ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.
ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆಯನ್ನು ಸರ್ಕಾರ ನಡೆಸಲಿದೆ. ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು’ ಎಂದು ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದರು. ಆದರೆ ಇದೀಗ ಮುಂದಿನ ಆದೇಶದವರೆಗೆ ಯಾವುದೇ ಹೊಸ ಪಡಿತರ ಚೀಟಿಯನ್ನು ಮಂಜೂರು ಮಾಡದಂತೆ ನಿರ್ದೇಶಿಸಿದೆ.