ಬೆಂಗಳೂರು : ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಎದುರಾಗಿದ್ದು, ‘ಸ್ಮಾರ್ಟ್ ಕಾರ್ಡ್’ ಪಡೆಯಲು ರಾಜ್ಯ ಸರ್ಕಾರ ‘ಸೇವಾ ಶುಲ್ಕ’ ನಿಗದಿ ಮಾಡಿದೆ.
ನಿನ್ನೆ ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ರಾಜ್ಯದ ಮಹಿಳೆಯರಿಗೆ ಬಿಗ್ ಶಾಕ್ ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯೋದಕ್ಕೆ ಸೇವಾ ಶುಲ್ಕವಾಗಿ ರೂ.14.16 ರೂ ನಿಗದಿ ಪಡಿಸುವ ಬಗ್ಗೆ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಆದರೆ ಇದುವರೆಗೆ ಈವರೆಗೆ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ಗೆ ಅರ್ಜಿಯನ್ನೇ ಆರಂಭಿಸಿಲ್ಲ.
ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ. ಶಕ್ತಿ ಸ್ಮಾರ್ಟ್ ಕಾರ್ಡ್ ಗಳಿಗಾಗಿ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. ಆದರೆ ಇನ್ನೂ ಅರ್ಜಿ ಸಲ್ಲಿಕೆ ಆರಂಭವಾಗಿಲ್ಲ.
ಸ್ಮಾರ್ಟ್ ಕಾರ್ಡ್ ಪಡೆಯುವ ತನಕ ಪ್ರಯಾಣಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಮಹಿಳಾ ಪ್ರಯಾಣಿಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು. ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ‘ಶಕ್ತಿ’ ಸ್ಮಾರ್ಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್ ಗಳಿಗಾಗಿ ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಮಾರ್ಟ್ ಕಾರ್ಡ್ ಪಡೆಯುವ ತನಕ ಪ್ರಯಾಣಿಸುವ ಸಂದರ್ಭದಲ್ಲಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಮಹಿಳಾ ಪ್ರಯಾಣಿಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು.