![](https://kannadadunia.com/wp-content/uploads/2019/07/793916327vidhansoudha_Main-2.jpg)
ಬೆಂಗಳೂರು : ಖಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ.
ಈ ಕುರಿತು ಸಚಿವ ಸುಧಾಕರ್ ಮಾಹಿತಿ ನೀಡಿದ್ದು, ರಾಜ್ಯದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವಂತೆ ಪ್ರಸ್ತಾಪ ಮಾಡಿದರು. ಖಾಲಿ ಹುದ್ದೆಗೆ ಕಾಯಂ ಮಾಡಲು ನಿಯಮಗಳಲ್ಲಿ ಅವಕಾಶ ಇಲ್ಲ ಎಂದು ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆ ಬಗ್ಗೆ ಉನ್ನತ ಅಧಿಕಾರಿಗಳ ಸಮಿತಿ ರಚನೆ ಮಾಡಲಾಗಿದೆ. ಸಮಿತಿಯ ವರದಿಯ ಪ್ರಕಾರ ಪರಿಶೀಲನೆ ಮಾಡಲಾಗಿದೆ. 32 ಸಾವಿರದಿಂದ 26 ಸಾವಿರದವರೆಗೂ ವೇತನ ನೀಡಲಾಗುತ್ತಿದೆ, ವಿವಿಧ ಮಾನದಂಡದ ಆಧಾರದ ಮೇಲೆ ವೇತನ ನಿಗದಿ ಮಾಡಲಾಗಿದೆ ಎಂದರು.