![](https://kannadadunia.com/wp-content/uploads/2024/02/Karmika-card.jpg)
ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಕಾರ್ಮಿಕ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ನಕಲಿ ಕಾರ್ಡ್ ಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪ್ರತಿ ಜಿಲ್ಲೆಯಲ್ಲೂ 2.5 ಲಕ್ಷದಿಂದ 3 ಲಕ್ಷ ಕಾರ್ಮಿಕ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಅವುಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚು ಅನರ್ಹರ ಪಾಲಾಗಿವೆ. ಹಾವೇರಿ ಜಿಲ್ಲೆಯಲ್ಲಿ 3 ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿತ್ತು. ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿದಾಗ 2.70 ಲಕ್ಷ ಅನರ್ಹ ಫಲಾನುಭವಿಗಳು ಪತ್ತೆಯಾಗಿದ್ದಾರೆ ತಿಳಿಸಿದ್ದಾರೆ.
ಅನರ್ಹ ಫಲಾನುಭವಿಗಳ ಪತ್ತೆಗೆ ಇನ್ನಷ್ಟು ಪರಿಶೀಲನೆ ಅಗತ್ಯವಿದೆ. ಕೆಲವು ತಿಂಗಳೊಳಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ, ಅನರ್ಹರಿಗೆ ನೀಡಿರುವ ಕಾರ್ಡ್‌ಗಳ ರದ್ಧತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.