ಸುಳ್ಳು ದಾಖಲೆ ನೀಡಿ ಸರ್ಕಾರಿ ಆಸ್ತಿ ಕಬಳಿಸುವವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಕಲಬುರಗಿ : ರಾಜ್ಯ ಸರ್ಕಾರವು ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸುವ ದಲ್ಲಾಳಿಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕಂದಾಯ ವಿಭಾಗ ಮಟ್ಟದ ಪ್ರಗತಿ ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದ ಅವರು,ಸರ್ಕಾರಿ ಮತ್ತು ಖಾಸಗಿ ಆಸ್ತಿಯನ್ನು ಸುಳ್ಳು ಮಾಹಿತಿ ನೀಡಿ, ವಂಚಿಸಿ ಅಥವಾ ಕೊಟ್ಟಿ ದಾಖಲೆ‌ ಸೃಷ್ಟಿಸಿ ದುರಪಯೋಗದ ಮೂಲಕ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ನೊಂದಾಯಿಸಿರುವುದು ಕಂಡುಬಂದಲ್ಲಿ ಜಿಲ್ಲಾ ನೋಂದಣಾಧಿಕಾರಿಗಳು ಅಂತಹ ಪ್ರಕರಣಗಳು ಕೈಗೆತ್ತಿಕೊಂಡು ಸದರಿ ದಸ್ತಾವೇಜನ್ನು ರದ್ದುಪಡಿಸುವ ಅಧಿಕಾರ ಒದಗಿಸುವ ಕುರಿತು ಕಳೆದ ಅಧಿವೇಶನದಲ್ಲಿ ಕಾಯ್ದೆಗೆ ತಿದ್ದುಪಡಿ ತಂದಿದ್ದು, ರಾಷ್ಡ್ರಪತಿಗಳ ಅಂಕಿತಕ್ಕೆ ಕಳುಹಿಸಿದೆ. ಮುಂದಿನ 3-4 ತಿಂಗಳಲಿನಲ್ಲಿ ಗೆಜೆಟ್ ರೂಪದಲ್ಲಿ ಆದೇಶ ಹೊರಬೀಳಲಿದೆ. ಇದರಿಂದ ಕಂಡವರ ಅಸ್ತಿ ಕಬಳಿಸುವ ದಲ್ಲಾಳಿಗಳಿಗೆ ಕಡಿವಾಣ ಬೀಳಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಹಿಂದೆಲ್ಲ ಸುಳ್ಳು ದಾಖಲೆ ಸೃಷ್ಠಿಸಿ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಾಯಿಸಿಕೊಂಡು ಆಸ್ತಿ ಕಬಳಿಕೆದಾರರು ಸಾರ್ವಜನಿಕರಿಗೆ ಅನಗತ್ಯ  ತೊಂದರೆ ನೀಡುತ್ತಿದ್ದರು. ವಿಜಯಪುರ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಿವೆ. ಸುಳ್ಳು ದಾಖಲೆಗಳ ನೋಂದಣಿ ಗೊತ್ತಾದ ನಂತರ ಆಸ್ತಿ ಮಾಲೀಕರು ಸಿವಿಲ್‌ ನ್ಯಾಯಲಯ, ಉಚ್ಛ ನ್ಯಾಯಾಲಯ, ಸುಪ್ರೀಂ ಕೋರ್ಟ್ ಹೀಗೆ 5-6 ವರ್ಷ ನ್ಯಾಯಾಲಯಕ್ಕೆ ತಮ್ಮ ಆಸ್ತಿಗೆ ಅನಗತ್ಯ ಪರದಾಡಬೇಕಿತ್ತು. ಜಿಲ್ಲಾ ನೊಂದಣಾಧಿಕಾರಿಗಳಿಗೆ ಸುಳ್ಳು ದಸ್ತಾವೇಜು ರದ್ದುಪಡಿಸುವ ಅಧಿಕಾರ‌ ನೀಡಿದ್ದರಿಂದ ಸಾರ್ವಜನಿಕರಿಗೆ ಮುಂದಿನ ದಿನದಲ್ಲಿ ತ್ವರಿತ ನ್ಯಾಯಲಯ ಸಿಗಲು ಅನುಕೂಲವಾಗಲಿದೆ‌ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read