ಬೆಂಗಳೂರು : ಖಾಯಂ ನಿರೀಕ್ಷೆಯಲ್ಲಿದ್ದ ರಾಜ್ಯದ ಅತಿಥಿ ಉಪನ್ಯಾಸಕರಿಗೆ ಬಿಗ್ ಶಾಕ್ ಎದುರಾಗಿದ್ದು, ಸೇವೆ ಖಾಯಂ ಅಸಾಧ್ಯ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ಸೇವೆ ಕಾಯಮಾತಿಗೆ ಕಾನೂನಿನ ತೊಡಕು ಇರುವುದರಿಂದ ಸೇವೆ ಕಾಯಂ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ಅತಿಥಿ ಉಪನ್ಯಾಸಕರು ನಡೆಸುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ಪೇಟೆಯಿಂದ ನೆಲಮಂಗಲದವರೆಗೆ ಪಾದಯಾತ್ರೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಉಮಾದೇವಿ ಪ್ರಕರಣದ ತೀರ್ಪು ಬಂದ ನಂತರ ಅತಿಥಿ ಉಪನ್ಯಾಸಕರ ಸೇವೆ ಕಾಯಂ ಮಾಡಲು ತೊಡಕು ಉಂಟಾಗಿದೆ. ಈವರೆಗೆ ಯಾವುದೇ ರಾಜ್ಯದಲ್ಲಿ ಸೇವೆ ಕಾಯಂ ಮಾಡಿಲ್ಲ. ಕಾನೂನಿನ ತೊಡಕಿದ್ದರೂ ಕೆಲವರು ಕಾಯಂ ಮಾಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದರು.
ಕೊಪ್ಪಳದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಳ್ಳಲು ಆಗುವುದಿಲ್ಲ. ಅದಕ್ಕೆ ಕಾನೂನಿನ ತೊಡಕಿದೆ ಎಂದು ಈಗಾಗಲೇ ಅವರಿಗೆ ಹೇಳಿದ್ದೇವೆ. ಆದರೂ ಅವರು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.