alex Certify ಬಿಜೆಪಿಗೆ ಬಿಗ್ ಶಾಕ್ : 40% ಕಮಿಷನ್ ಆರೋಪ, ಕೋವಿಡ್ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಬಿಗ್ ಶಾಕ್ : 40% ಕಮಿಷನ್ ಆರೋಪ, ಕೋವಿಡ್ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಬಿಗ್ ಶಾಕ್ ನೀಡಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಹಾಗೂ ಕೋವಿಡ್ ಹಗರಣವನ್ನು ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರವು ಎರಡು ಪ್ರತ್ಯೇಕ ಆದೇಶ ಹೊರಡಿಸಿದೆ.

ಕೋವಿಡ್ ಸಂದರ್ಭದಲ್ಲಿ ಖರೀದಿ ಅಕ್ರಮ ಅಪಾದನೆ ಕುರಿತಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಧಾನಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ವರದಿ ಆಧಿರಿಸಿ ಈ ಆಯೋಗ ರಚಿಸಲಾಗಿದೆ.

1 ಕೋವಿಡ್ 19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಔಷಧಿ ಹಾಗೂ ಉಪಕರಣಗಳ ಖರೀದಿಗೆ ಸಂಬಂಧಿಸಿದಂತೆ ಹಾಗೂ ಇತರ ವಿಷಯಗಳ ಕುರಿತು 2021ರ ಜುಲೈ- ಅಗಸ್ಟ್ ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋಪಗಳ ಬಗ್ಗೆ ಚರ್ಚಿಸಿದ ಈ ಪ್ರಕರಣದಲ್ಲಿ ತನಿಖೆ ನಡೆಸುವುದು ಸೂಕ್ತವೆಂದು ಮನಗಂಡು, Commission of Inquiry Act 1952 ರ ನಿಯಮ 3ರ ಉಪ ನಿಯಮ 1ರನ್ವಯ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಚಾರಣಾ ಆಯೋಗವನ್ನು ರಚಿಸಲು ಸರ್ಕಾರವು ತೀರ್ಮಾನಿಸಿದ.

2 ಈ ಹಿನ್ನಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗದ ನಿವಾರಣೆ ಹಾಗೂ ತಡೆಗಟ್ಟುವಿಕೆ ಸಂಬಂಧವಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವ್ಯದ್ಯಕೀಯ ಶಿಕ್ಷಣ ಇಲಾಖೆ ಮತ್ತು ಇತರೆ ಇಲಾಖೆಗಳು ಹಾಗೂ ಈ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಂಸ್ಥೆಗಳಲ್ಲಿ ಔಷಧಿ, ಉವಕರಣಗಳು ಹಾಗೂ ಸಾಮಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ನಾವುಗಳು ಹಾಗೂ ಇತ್ಯಾದಿ ವಿಷಯಗಳ ಕುರಿತು 2021ರ ಜುಲೈ, ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿನ ಗಂಭೀರವಾದ ಆರೋವಗಳ ಬಗ್ಗೆ ತನಿಖೆಯನ್ನು ನಡೆಸಲು Commission of Inquiry Act 1952 ರ ನಿಯಮ 3 ಉಪನಿಯಮ 1 ರಲ್ಲಿ ಪ್ರದತ್ತವಾದ ಅಧಿಕಾರದನ್ವಯ ಸರ್ಕಾರವು ಮಾನ, ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ಜಾನ್‌ ಮೈಕಲ್‌ ಕುನ್ನಾ ಇವರ ನೇತೃತ್ವದಲ್ಲಿ ವಿಚಾರಣಾ ಆಯೋಗವನ್ನು ನೇಮಿಸಲಾಗಿದೆ.

3 2021 ಜುಲೈ, ಆಗಸ್ಟ್‌ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ನೀಡಿರುವ ವರದಿಯಲ್ಲಿ ಗಂಭೀರವಾದ ಆರೋವಗಳ ಕುರಿತು ವಿಚಾರಣಾ ಆಯೋಗವು Commissions of Inquiry Act 1952 ಹಾಗೂ Code of Civil Procedure ರಲ್ಲಿನ ಅವಕಾಶದಡಿ ತನಿಖೆ ನಡೆಸಲು ಎಲ್ಲಾ ಅಧಿಕಾರವನ್ನು ಹೊಂದಿರುತ್ತದೆ. ಹಾಗೂ ತನಿಖೆಯನ್ನು 03 ತಿಂಗಳೊಳಗಾಗಿ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸತಕ್ಕದ್ದೆಂದು ಸರ್ಕಾರವು ಅಪೇಕ್ಷಿಸುತ್ತದೆ. ಈ ವಿಚಾರಣಾ ಆಯೋಗಕ್ಕೆ ಸಮಗ್ರ ಮಾಹಿತಿ / ದಾಖಲೆಗಳನ್ನು ಒದಗಿಸಿ ಆಯೋಗವು ತನಿಖೆಯನ್ನು ಪೂರ್ಣಗೊಳಿಸಲು ಹಾಗೂ ವೈದ್ಯರು/ತಾಂತ್ರಿಕ ಸಲಹೆಗಾರರು / ಆರ್ಥಿಕ ಸಲಹೆಗಾರರು | ಆಡಳಿತಾತ್ಮಕ ಸಲಹಗಾರರನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳು ಸಹಕರಿಸತಕ್ಕದ್ದು.

4 ವಿಚಾರಣಾ ಆಯೋಗಕ್ಕೆ ಸಂಬಂಧಪಟ್ಟಂತ ಆಯಾ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲಾ ಕಡತಗಳು | ದಾಖಲಾತಿಗಳು / ಇತ್ಯಾದಿಗಳನ್ನು ಒದಗಿಸತಕ್ಕದ್ದು ಹಾಗೂ ಸ್ಥಳ ತನಿಖೆ ಸಂದರ್ಭದಲ್ಲಿ ಖುದ್ದು ಹಾಜರಿದ್ದು, ವಿಚಾರಣಾ ಆಯೋಗದೊಂದಿಗೆ ಸಂಪೂರ್ಣವಾಗಿ ಸಹಕರಿಸತಕ್ಕದ್ದು.

5  ವಿಚಾರಣಾ ಆಯೋಗಕ್ಕೆ, ಅಗತ್ಯವಿರುವ ಸಿಬ್ಬಂದಿ, ಸಾಮಗ್ರಿಗಳು, ವಾಹನಗಳ ವ್ಯವಸ್ಥೆ ಹಾಗೂ ಕಛೇರಿ ಮತ್ತು ಅಗತ್ಯ ಸಲಕರಣೆಗಳನ್ನು ಒದಗಿಸತಕ್ಕದ್ದು. ಆಯೋಗಕ್ಕೆ ಭತ್ಯೆ, ಸೌಲಭ್ಯಗಳನ್ನು ನಿಯಮಾನುಸಾರ ಕಲ್ಪಿಸುವುದು.

6 ಸದರಿ ವಿಚಾರಣಾ ಆಯೋಗಕ್ಕೆ ಅಗತ್ಯವಿದ್ದಲ್ಲಿ, ಅಧ್ಯಕ್ಷರ ಕೋರಿಕೆಯ ಮೇರೆಗೆ ಗುಣಮಟ್ಟ ಪರೀಕ್ಷೆಗೆ ನೋಂದಾಯಿತ 3ನೇ ಸ್ವತಂತ್ರ ಸಂಸ್ಥೆಯ (3rd Party Assistance) ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ವಹಿಸುವುದು.

7 ಆಯೋಗವು ಬೆಂಗಳೂರು ಕೇಂದ್ರ ಸ್ನಾನದಲ್ಲಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಕಛೇರಿಗೆ ಸ್ಥಳಾವಕಾಶ ಮಾನ್ಯ ಆಯೋಗದ ಮಾನ್ಯ ನ್ಯಾಯಾಧೀಶರಿಗೆ, ಆಯೋಗದ ಕಾರ್ಯದರ್ಶಿಯವರಿಗೆ ಹಾಗೂ ಅಧಿಕಾರಿ / ಸಿಬ್ಬಂದಿಗಳಿಗೆ ವಾಹನಗಳು, ಪೀಠೋಪಕರಣಗಳು, ದೂರವಾಣಿ ವ್ಯವಸ್ಥೆ, ಇತ್ಯಾದಿ ಸೌಲಭ್ಯಗಳನ್ನು ಒದಗಿಸಲು ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರು ಕ್ರಮ ಕೈಗೊಳ್ಳತಕ್ಕದ್ದು ಎಂದು ಆದೇಶಿಸಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...