ಬೆಂಗಳೂರು : ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್, ಬಿಪಿಎಲ್ ಕಾರ್ಡ್ ನಲ್ಲಿ ಮನೆಯ ಮುಖ್ಯಸ್ಥ ಪುರುಷನಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮೀ ಯೋಜನೆಯ ಲಾಭ ಸಿಗಲ್ಲ ಎಂದು ಹೇಳಲಾಗುತ್ತಿದೆ.
ಬಿಪಿಎಲ್ ಕಾರ್ಡ್ನಲ್ಲಿ ಮುಖ್ಯಸ್ಥರು ಪುರುಷರಾಗಿದ್ದರೆ ಅನ್ನಭಾಗ್ಯ, ಗೃಹಲಕ್ಷ್ಮಿ ಯೋಜನೆಯ ಲಾಭಪಡೆಯಲಾಗಲ್ಲ. ಕಾಂಗ್ರೆಸ್ ಸರ್ಕಾರದ ಮಹತ್ವದ ಐದು ಗ್ಯಾರಂಟಿಗಳ ಪೈಕಿ ಈಗಾಗಲೇ ನಾಲ್ಕು ಗ್ಯಾರಂಟಿಗಳಿಗೆ ಚಾಲನೆ ಸಿಕ್ಕಿದೆ. ಗೃಹಲಕ್ಷ್ಮಿ ಯೋಜನೆಗೆ ಇದೀಗಾ ಹೊಸ ಸಂಕಷ್ಟ ಎದುರಾಗಿದೆ. ಬಿಪಿಎಲ್ ಕಾರ್ಡ್ನಲ್ಲಿ ಪುರುಷರು ಮುಖ್ಯಸ್ಥರಿದ್ದವರಿಗೆ ಅನ್ನಭಾಗ್ಯ ಹಾಗೂ ಗೃಹ ಲಕ್ಷ್ಮಿ ಯೋಜನೆಯ ಲಾಭ ಸಿಗುವುದಿಲ್ಲ ಎಂದು ಹೇಳಲಾಗುತ್ತಿದೆ.
ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ. ಆದರೆ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ 2,000 ರೂ. ಸಿಗದೆ ನಿರಾಸೆಗೊಂಡ ಮಹಿಳೆಯರು ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಎಂದು ತಿದ್ದುಪಡಿ ಮಾಡಲು ಸೆಪ್ಟೆಂಬರ್ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದೆ.
ಪಡಿತರ ಚೀಟಿಗೆ ಹೆಸರು ಸೇರಿಸುವುದು/ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ
ಪಡಿತರ ಚೀಟಿಯಲ್ಲಿ ಹೆಸರು ಸೇರಿಸುವುದು ಬಹಳ ಮುಖ್ಯ. ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸುವ ಕೆಲಸವನ್ನು ಕೆಲವೇ ನಿಮಿಷದಲ್ಲಿ ಮಾಡಬಹುದು. ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಪಡಿತರ ಚೀಟಿಗೆ ಹೆಸರು ಸೇರಿಸಬಹುದು. ಇದಕ್ಕೆ ಬೇಕಾಗುವ ದಾಖಲೆಗಳ ಮಾಹಿತಿ ಇಲ್ಲಿದೆ.
ಹೊಸ ಸದಸ್ಯರ ಹೆಸರು ಸೇರ್ಪಡೆ : ಮದುವೆಯಾದ ನಂತ್ರ ಮನೆಗೆ ಬರುವ ಸೊಸೆಯ ಹೆಸರನ್ನು ರೇಷನ್ ಕಾರ್ಡ್ ಗೆ ಸೇರಿಸಬೇಕಾಗುತ್ತದೆ. ಮಹಿಳೆಯ ಆಧಾರ್ ಕಾರ್ಡ್, ಮದುವೆ ಪ್ರಮಾಣಪತ್ರ, ಗಂಡನ ಪಡಿತರ ಚೀಟಿಯ ಫೋಟೋ ಕಾಪಿ ನೀಡಬೇಕು. ಹಾಗೆ ಆಕೆಯ ತಂದೆ ಮನೆಯ ರೇಷನ್ ಕಾರ್ಡ್ ನಲ್ಲಿರುವ ಹೆಸರನ್ನು ತೆಗೆಯಬೇಕು.
ಮೊದಲು ಆಹಾರ ಪೂರೈಕೆ ಅಧಿಕೃತ ವೆಬ್ಸೈಟ್ ಗೆ ಹೋಗಬೇಕು. ಬೇರೆ ಬೇರೆ ರಾಜ್ಯಗಳು ಬೇರೆ ಬೇರೆ ವೆಬ್ಸೈಟ್ ಹೊಂದಿವೆ. ವೆಬ್ಸೈಟ್ ಗೆ ಲಾಗಿನ್ ಆದ ನಂತ್ರ ಐಡಿ ರಚಿಸಬೇಕು. ಈಗಾಗಲೇ ಐಡಿ ರಚಿಸಿದ್ದರೆ ಲಾಗಿನ್ ಆಗಬೇಕು. ಲಾಗಿನ್ ಆದ್ಮೇಲೆ ಹೊಸ ಸದಸ್ಯರ ಆಯ್ಕೆ ಕಾಣಿಸುತ್ತದೆ. ಅದ್ರ ಮೇಲೆ ಕ್ಲಿಕ್ ಮಾಡಬೇಕು.
ಅಲ್ಲಿ ಹೊಸ ಫಾರ್ಮ್ ಕಾಣಿಸುತ್ತದೆ. ಅಲ್ಲಿ ಕುಟುಂಬಸ್ಥರ ಎಲ್ಲ ಮಾಹಿತಿ ಭರ್ತಿ ಮಾಡಬೇಕು. ಫಾರ್ಮ್ ಜೊತೆಗೆ ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಯನ್ನು ಅಪ್‌ಲೋಡ್ ಮಾಡಬೇಕು. ನಂತ್ರ ಶುಲ್ಕ ಪಾವತಿ ಮಾಡಬೇಕಾಗುತ್ತದೆ.
ನಮೂನೆ ಸಲ್ಲಿಕೆಯ ನಂತರ ನೋಂದಣಿ ಸಂಖ್ಯೆಯನ್ನು ನೀಡಲಾಗುತ್ತದೆ. ಫಾರ್ಮ್ ಅನ್ನು ಈ ಪೋರ್ಟಲ್ ನಲ್ಲಿ ಟ್ರ್ಯಾಕ್ ಮಾಡಬಹುದು. ಅಧಿಕಾರಿಗಳು ನಮೂನೆ ಮತ್ತು ದಾಖಲೆಗಳನ್ನು ಪರಿಶೀಲಿಸುತ್ತಾರೆ. ಎಲ್ಲವೂ ಸರಿಯಾಗಿದ್ದರೆ ನಮೂನೆಯನ್ನು ಸ್ವೀಕರಿಸಲಾಗುತ್ತದೆ ಮತ್ತು ಪಡಿತರ ಚೀಟಿಯನ್ನು ಅಂಚೆ ಮೂಲಕ ಮನೆಗೆ ತಲುಪಿಸಲಾಗುತ್ತದೆ.
ಮಗುವಿನ ಹೆಸರು ಸೇರ್ಪಡೆ : ಪಡಿತರ ಚೀಟಿಯಲ್ಲಿ ಮಗುವಿನ ಹೆಸರನ್ನು ಸೇರಿಸಬೇಕಾದರೆ, ಮನೆಯ ಮುಖ್ಯಸ್ಥರ ಪಡಿತರ ಚೀಟಿ, ಮಗುವಿನ ಜನನ ಪ್ರಮಾಣಪತ್ರ ಮತ್ತು ಇಬ್ಬರ ಪೋಷಕರ ಆಧಾರ್ ಕಾರ್ಡ್ ಅಗತ್ಯವಿರುತ್ತದೆ.
ಆಫ್ಲೈನ್ ಅರ್ಜಿ
ಅರ್ಜಿ ಸಲ್ಲಿಸುವವರು ಹತ್ತಿರದ ಆಹಾರ ಪೂರೈಕೆ ಕೇಂದ್ರಕ್ಕೆ ಹೋಗಬೇಕು. ಎಲ್ಲಾ ಅಗತ್ಯ ದಾಖಲೆಗಳನ್ನು ಅಧಿಕಾರಿಗಳಿಗೆ ನೀಡಬೇಕು. ಹೊಸ ಸದಸ್ಯರ ಹೆಸರನ್ನು ಸೇರಿಸುವ ಅರ್ಜಿ ಭರ್ತಿ ಮಾಡಬೇಕು. ಅರ್ಜಿ ಶುಲ್ಕವನ್ನು ಜಮಾ ಮಾಡಬೇಕು. ನಮೂನೆಯನ್ನು ಸಲ್ಲಿಸಿದ ನಂತರ, ಅಧಿಕಾರಿಗಳು ರಶೀದಿಯನ್ನು ನೀಡುತ್ತಾರೆ. ರಶೀದಿಯ ಮೂಲಕ, ಆನ್ಲೈನ್ ಅರ್ಜಿಯ ಸ್ಥಿತಿಯನ್ನು ಪರಿಶೀಲಿಸಬಹುದು.