ಮಂಡ್ಯ : ಮಂಡ್ಯ ಜಿಲ್ಲೆಯ ರೈತರಿಗೆ ಬಿಗ್ ಶಾಕ್ ಎದುರಾಗಿದ್ದು, ಮಂಡ್ಯ ಜಿಲ್ಲೆಯ ರೈತರ ಜೀವನಾಡಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ.
ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ. ಕೆಆರ್ಎಸ್ ಜಲಾಶಯದ ಒಳ ಹರಿವು 1378 ಕ್ಯೂಸೆಕ್. ಕೆಆರ್ಎಸ್ ಜಲಾಶಯದ ಹೊರ ಹರಿವು 2345 ಕ್ಯೂಸೆಕ್ ನೀರು ಇದೆ. ಹೀಗಾಗಿ ಮಳೆ ಕೊರತೆ ಹಿನ್ನೆಲೆ ಬೆಳೆದು ಕಳೆದುಕೊಳ್ಳುವ ಆತಂಕದಲ್ಲಿರುವ ರೈತರಿಗೆ ಇದೀಗ ಮತ್ತೊಂದು ಆತಂಕ ಎದುರಾಗಿದೆ.
ದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಕರ್ನಾಟಕದಿಂದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಲಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದಂತೆ ಕರ್ನಾಟಕವು ತಮಿಳುನಾಡಿಗೆ 11 ದಿನಗಳಲ್ಲಿ ಪ್ರತಿದಿನ 10 ಸಾವಿರ ಕ್ಯುಸೆಕ್ ನಂತೆ ಒಟ್ಟಾರೆ 10 ಟಿಎಂಸಿ ನೀರು ಹರಿಸಿದೆ.
ಕಾವೇರಿ ನದಿಯಿಂದ ಪ್ರತಿದಿನ 24 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ನಿರ್ದೇಶನ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಅರ್ಜಿ ಸೆಪ್ಟೆಂಬರ್ 1 ರಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ.