ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿ ಮಾಡುತ್ತಿರುವ ಅನರ್ಹರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಶೀಘ್ರವೇ ಅನರ್ಹರರ ವಶದಲ್ಲಿರುವ ಜಮೀನುಗಳನ್ನು ಸ್ವಾಧೀನಕ್ಕೆ ಪಡೆಯಲು ನಿರ್ಧರಿಸಿಲಾಗಿದೆ.
ರಾಜ್ಯದಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಮೂನೆ 50, ನಮೂನೆ 53 ಮತ್ತು ನಮೂನೆ 57ರ ಅಡಿಯಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಕಂದಾಯ ಇಲಾಖೆ ಸೂಚನೆ ನೀಡಿದ್ದು, ಅನರ್ಹ ಅರ್ಜಿದಾರರ ವಶದಲ್ಲಿರುವ ಜಮೀನುಗಳನ್ನು ಸ್ವಾಧೀನಕ್ಕೆ ಪಡೆಯಲು ಮುಂದಾಗಿದೆ.
ಬಗರ್ ಹುಕುಂ ಅರ್ಜಿಗಳ ವಿಲೇವಾರಿಯಲ್ಲಿ ಅಕ್ರಮ ತಡೆಗೆ ಕಂದಾಯ ಇಲಾಖೆಯು ಮಹತ್ವದ ಕ್ರಮ ಕೈಗೊಂಡಿದ್ದು, ಡಿಜಿಟಲ್ ತಂತ್ರಜ್ಞಾನದ ಬಳಕೆ ಮಾಡುತ್ತಿದೆ. ಈ ಮೂಲಕ ನಮೂನೆ 50, 53 ಮತ್ತು 57ರಡಿ ಸ್ವೀಕೃತವಾಗಿರುವ ಅರ್ಜಿಗಳ ಪಟ್ಟಿಗಳನ್ನು ಡಿಜಿಟಲೀಕರಣ ಮಾಡಿ, ಹೊಸ ಹೆಸರು ಸೇರಿಸಲಾಗದಂತೆ ಲಾಕ್ ಮಾಡಲಾಗಿದೆ. ಜೊತೆಗೆ ಅನರ್ಹ ಫಲಾನುಭವಿಗಳ ಜಮೀನು ಸ್ವಾಧೀನಕ್ಕೆ ಕಂದಾಯ ಇಲಾಖೆ ಸಿದ್ಧತೆ ನಡೆಸಿದೆ.