ನವದೆಹಲಿ : ಕರ್ನಾಟಕಕ್ಕೆ ಕಾವೇರಿ ನೀರು ನಿಯಂತ್ರಣ ಸಮಿತಿ ಬಿಗ್ ಶಾಕ್ ನೀಡಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ 5 ಟಿಎಂಸಿ ನೀರು ಹರಿಸಲು ಸೂಚನೆ ನೀಡಿದೆ.
ದೆಹಲಿಯಲ್ಲಿ ಸೋಮವಾರ ಸಿಡಬ್ಲುಆರ್ ಸಿ ಸಮಿತಿಯ ಮಹತ್ವದ ಸಭೆ ನಡೆದಿದ್ದು, 7.61 ಟಿಎಂಸಿ ಬಾಕಿ ಜೊತೆಗೆ ಫೆಬ್ರವರಿಯಿಂದ ಮೇ ತಿಂಗಳವರೆಗೆ ಪ್ರತಿ ತಿಂಗಳು 2.5 ಟಿಎಂಸಿ ನೀರು ಹರಿಸಲು ಕರ್ನಾಟಕಕ್ಕೆ ಸೂಚಿಸಬೇಕು ಎಂದು ತಮಿಳುನಾಡು ಒತ್ತಾಯಿಸಿದೆ.
ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು ರಾಜ್ಯದಲ್ಲಿ ತೀವ್ರ ಬರಗಾಲ ಇದೆ. ಹೀಗಾಗಿ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ಸಮಿತಿಯು ನ್ಯಾಯಾಧಿಕರಣದ ಸೂಚನೆಯಂತೆ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸಲು ಶಿಫಾರಸ್ಸು ಮಾಡಿದೆ.