ಬೆಳಗಾವಿ : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಶಾಕ್ ನೀಡಿದ್ದು, ಮುದ್ರಾಂಕ ಶುಲ್ಕ ಹೆಚ್ಚಳ ಮಸೂದೆಯನ್ನು ವಿಧಾನಪರಿಷತ್ ನಲ್ಲೂ ಅಂಗೀಕಾರ ಮಾಡಲಾಗಿದೆ.
ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಮುದ್ರಾಂಕ ಶುಲ್ಕ ಹೆಚ್ಚಿಸುವ ತಿದ್ದುಪಡಿ ವಿಧೇಯಕಕ್ಕೆ ಪರಿಷತ್ ನಲ್ಲೂ ಅನುಮೋದನೆ ನೀಡಲಾಯಿತು.
ಸಚಿವ ಕೃಷ್ಣ ಬೈರೇಗೌಡ ಸದನದಲ್ಲಿ ಮಸೂದೆ ಮಂಡಿಸಿ ತಿದ್ದುಪಡಿ ವಿಧೇಯಕದಲ್ಲಿ ಸಾಲದ ಕರಾರು ಪತ್ರ, ಅಡಮಾನ, ದತ್ತು, ಹಸ್ತಾಂತರ ಪ್ರಮಾಣ ಪತ್ರ, ಒಪ್ಪಂದ ಪತ್ರ ಸೇರಿದಂತೆ ೫೪ ನೋಂದಣಿಯೇತರ ದಾಖಲೆಗಳ ಮೇಲಿನ ಮುದ್ರಾಂಶ ಶುಲ್ಕವನ್ನು ನಾಲ್ಕಾರು ಪಟ್ಟು ಹೆಚ್ಚಿಸಲು ಅವಕಾಶ ಕಲ್ಪಿಸಲಾಗಿದೆ. ಇತರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಮುದ್ರಾಂಕ ಶುಲ್ಕ ಪರಿಷ್ಕರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.