ಬೆಂಗಳೂರು : ಸುಳ್ಳು ದಾಖಲೆಗಳನ್ನು ನೀಡಿ ಕಾರ್ಮಿಕರ ಕಾರ್ಡ್ ಪಡೆದವರಿಗೆ ರಾಜ್ಯ ಸರ್ಕಾರವು ಬಿಗ್ ಶಾಕ್ ನೀಡಿದೆ. ನಕಲಿ ಕಾರ್ಮಿಕ ಕಾರ್ಡ್ ತಡೆಯಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಸಂತೋಷ್ ಲಾಡ್, ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಒಟ್ಟು 45 ಲಕ್ಷ ಕಾರ್ಮಿಕರು ಕಾರ್ಮಿಕ ಕಾರ್ಡ್ ಗಳನ್ನು ಹೊಂದಿದ್ದಾರೆ. ಕಳೆದ ಒಂದೇ ವರ್ಷ 39 ಲಕ್ಷ ಹೊಸ ಕಾರ್ಡ್ ಗಳನ್ನು ನೀಡಲಾಗಿದೆ. ರಾಜ್ಯದಲ್ಲಿ ಶೇ. 60ರಿಂದ 70 ರಷ್ಟು ಕಾರ್ಡ್ ಗಳು ನಕಲಿ ಕಾರ್ಡ್ ಗಳಾಗಿದ್ದು, ಅವುಗಳನ್ನು ತಡೆಯಲು ಹೊಸ ಆ್ಯಪ್ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅರ್ಹ ಕಾರ್ಮಿಕರಿಗೆ ಮಾತ್ರ ಕಾರ್ಮಿಕರ ಕಾರ್ಡ್ ವಿತರಣೆಗೆ ಕ್ರಮಕೈಗೊಳ್ಳಲಾಗುತ್ತಿದ್ದು, ಅನರ್ಹ ಕಾರ್ಡ್ ಪಡೆದವರ ಕಾರ್ಡ್ ರದ್ದು ಮಾಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.