alex Certify BIG SHOCKING NEWS: ಸಿಎಂ ಮನೆ ಭದ್ರತೆಗಿದ್ದ ಕಾನ್ಸ್ ಟೇಬಲ್ ಗಳಿಂದಲೇ ಗಾಂಜಾ ಡೀಲ್; ಇಬ್ಬರು ಪೊಲೀಸರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG SHOCKING NEWS: ಸಿಎಂ ಮನೆ ಭದ್ರತೆಗಿದ್ದ ಕಾನ್ಸ್ ಟೇಬಲ್ ಗಳಿಂದಲೇ ಗಾಂಜಾ ಡೀಲ್; ಇಬ್ಬರು ಪೊಲೀಸರು ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರೇ ಗಾಂಜಾ ಮಾರಾಟ ಮಾಡಿ ಸಿಕ್ಕಿಬಿದ್ದ ಘಟನೆ ನಡೆದಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ಆರ್.ಟಿ.‌ ನಗರ ನಿವಾಸ ಭದ್ರತಾ ಕಾರ್ಯಕ್ಕೆ ನಿಯೋಜನೆಗೊಂಡಿದ್ದ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳು ಮೋಸ್ಟ್ ವಾಂಟೆಡ್ ಪೆಡ್ಲರ್ ಗಳಿಂದ ಗಾಂಜಾ ಖರೀದಿಸಿ, ಮಾರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಕೋರಮಂಗಲ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ಶಿವಕುಮಾರ್ ಹಾಗೂ ಸಂತೋಷ್ ಎಂಬುವವರು ಸಿಎಂ ನಿವಾಸದ ಭದ್ರತೆಗೆ ನಿಯೋಜನೆಗೊಂಡಿದ್ದರು.

ಇಬ್ಬರೂ ಸಿಬ್ಬಂದಿಗಳು ಪೆಡ್ಲರ್ ಗಳಿಂದ ಗಾಂಜಾ ತರಿಸಿ, ಆರ್.ಟಿ. ನಗರದ 80 ಅಡಿ ರಸ್ತೆ ಬಳಿ ಡೀಲ್ ಮಾಡುತ್ತಿದ್ದರು. ಸಿಎಂ ಮನೆ ಬಳಿ ಗಸ್ತಿನಲ್ಲಿದ್ದ ಹೊಯ್ಸಳ ಸಿಬ್ಬಂದಿಗೆ ಅನುಮಾನ ಬಂದು ಈ ಬಗ್ಗೆ ವಿಚಾರಣೆ ನಡೆಸಿದಾಗ ಸತ್ಯ ಬಯಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಇಬ್ಬರು ಕಾನ್ಸ್ ಟೇಬಲ್ ಸೇರಿದಂತೆ ನಾಲ್ವರನ್ನು ಆರ್.ಟಿ.ನಗರ ಪೊಲೀಸರು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...