ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಮತ್ತೋರ್ವ ಸ್ವಾಮೀಜಿ ಹೆಸರನ್ನು ಚೈತ್ರಾ ಕುಂದಾಪುರ ರಿವೀಲ್ ಮಾಡಿದ್ದಾರೆ.
ವಜ್ರದೇಹಿ ಮಠದ ರಾಜಶೇಖರಾನಂದ ಶ್ರೀಗಳ ಹೆಸರನ್ನು ಚೈತ್ರಾ ಕುಂದಾಪುರ ಪ್ರಸ್ತಾಪ ಮಾಡಿದ್ದಾರೆ ಎಂದು ಹೇಳಲಾಗಿದೆ. ಜುಲೈ.29ರಂದು ಮಧ್ಯಾಹ್ನ 12.43ಕ್ಕೆ ವಜ್ರದೇಹಿ ಮಠದ ರಾಜಶೇಖರಾನಂದ ಶ್ರೀಗಳು ಕರೆ ಮಾಡಿದ್ದರು. ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್ಎ ಟಿಕೆಟ್ ನೀಡುವ ಬಗ್ಗೆ ಮಾತನಾಡಿದ್ದರು ಎಂದು ಮತ್ತೋರ್ವ ಶ್ರೀಗಳ ಹೆಸರನ್ನು ತಳುಕು ಹಾಕಿದ್ದಾರೆ. ಈ ಮೂಲಕ ಕೇಸ್ ಗೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ.
ಉದ್ಯಮಿಗೆ 5 ಕೋಟಿ ವಂಚಿಸಿದ ಪ್ರಕರಣದಲ್ಲಿ ಇನ್ನೂ ಹಲವರ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸ್ವಾಮೀಜಿಗಳು ಸಿಕ್ಕಿಹಾಕಿಕೊಂಡರೆ ದೊಡ್ಡ ದೊಡ್ಡವರ ಹೆಸರು ಬಯಲಾಗುತ್ತದೆ ಎಂದು ಚೈತ್ರಾ ಕುಂದಾಪುರ ಇತ್ತೀಚೆಗೆ ಸ್ಪೋಟಕ ಹೇಳಿಕೆ ನೀಡಿದ್ದರು. ಉದ್ಯಮಿಗೆ 5 ಕೋಟಿ ಹಣ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಸಿಬಿ ಇದೀಗ ಅಭಿನವ ಹಾಲಶ್ರೀ ಬಂಧನಕ್ಕೆ ಬಲೆ ಬೀಸಿದೆ. ಅಭಿನವ ಹಾಲಶ್ರೀ ಹೈದರಾಬಾದ್ ನಲ್ಲಿ ಅಡಗಿರುವ ಶಂಕೆ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ಬಂಧಿಸಲು ತೆರಳಿದ್ದಾರೆ ಎಂದು ತಿಳಿದು ಬಂದಿದೆ.