ಗುಜರಾತ್ : ಗುಜರಾತ್ ನಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಬಾಲಕಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಎಂಟು ಗಂಟೆಗಳ ಸುದೀರ್ಘ ರಕ್ಷಣಾ ಪ್ರಯತ್ನದ ನಂತರ ಮನೆಯ 130 ಅಡಿ ಆಳದ ಕೊಳವೆಬಾವಿಯಿಂದ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗುವನ್ನು ಹೊರತೆಗೆದ ನಂತರ, ಸೋಮವಾರ ರಾತ್ರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ ಎಂದು ಘೋಷಿಸಲಾಯಿತು.
ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಭೂಮಿ ದ್ವಾರಕಾ ಜಿಲ್ಲೆಯ ರಾನ್ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಸುಮಾರು 3 ವರ್ಷದ ಏಂಜೆಲ್ ಸಖ್ರಾ ಆಕಸ್ಮಿಕವಾಗಿ ತನ್ನ ಮನೆಯ ಮುಂಭಾಗದ ಅಂಗಳದಲ್ಲಿರುವ ತೆರೆದ ಕೊಳವೆಬಾವಿಗೆ ಬಿದ್ದಿದ್ದಳು.
ಗುಜರಾತ್ ನ ದೇವಭೂಮಿ ದ್ವಾರಕಾ ಜಿಲ್ಲೆಯ ರಾನ್ ಗ್ರಾಮದಲ್ಲಿ ತೆರೆದ ಕೊಳವೆಬಾವಿಗೆ ಬಿದ್ದ ಮೂರು ವರ್ಷದ ಬಾಲಕಿಯನ್ನು ಸೋಮವಾರ ರಾತ್ರಿ ಸುಮಾರು ಒಂಬತ್ತು ಗಂಟೆಗಳ ನಂತರ ರಕ್ಷಿಸಲಾಗಿತ್ತು. ಸೇನೆ ಮತ್ತು ಎನ್ ಡಿ ಆರ್ ಎಫ್ ತಂಡಗಳು ರಕ್ಷಣಾ ಕಾರ್ಯಾಚರಣೆ ನಡೆಸಿದವು.ರಾತ್ರಿ 9:50 ರ ಸುಮಾರಿಗೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕಿಯನ್ನು 30 ಅಡಿ ಆಳದ ಕೊಳವೆಬಾವಿಯಿಂದ ಹೊರತೆಗೆದು ಚಿಕಿತ್ಸೆಗಾಗಿ ಜಾಮ್ನಗರದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ.