ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ನಟ ‘ಸೈಫ್ ಅಲಿ ಖಾನ್’ ಡಿಸ್ಚಾರ್ಜ್ ಆಗಿದ್ದಾರೆ. ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರು ನಿನ್ನೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಜನವರಿ 16 ರಂದು ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು.ಆಸ್ಪತ್ರೆಯಿಂದ ಸೈಫ್ ಅಲಿಖಾನ್ ಹೊರ ಬರುತ್ತಿರುವ ವಿಡಿಯೋ ವೈರಲ್ ಆಗಿದೆ.
ಆಪರೇಷನ್ ಮಾಡಿದ ವೈದ್ಯರು ಬೆನ್ನುಹುರಿಯಲ್ಲಿ ಸಿಲುಕಿದ್ದ ಚಾಕುವಿನ ತುಂಡನ್ನು ತೆಗೆದಿದ್ದರು. ನಂತರ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಅವರ ಚೇತರಿಕೆಯ ಪ್ರಗತಿಯನ್ನು ಪರಿಶೀಲಿಸುತ್ತಿದ್ದ ವೈದ್ಯರು ಸೈಫ್ ಅಲಿ ಖಾನ್ ರನ್ನು ಡಿಸ್ಚಾರ್ಜ್ ಮಾಡಿದ್ದಾರೆ.
View this post on Instagram