ಮುಂಬೈ: ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡ ಸೈಫ್ ಅಲಿ ಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ ಒಂದು ದಿನದ ನಂತರ, ಬಾಲಿವುಡ್ ನಟನಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡವು ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದೆ.
ಸೈಫ್ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ, ಸದ್ಯಕ್ಕೆ ಅವರಿಗೆ ಬೆಡ್ ರೆಸ್ಟ್ ಸೂಚಿಸಲಾಗಿದೆ ಎಂದು ಹೇಳಿದರು. ಸೈಫ್ ಅಲಿ ಖಾನ್ ಅವರ ಬೆನ್ನಿಗೆ ಚೂರಿ ಇರಿತವಾಗಿರುವುದರಿಂದ, ಅವರ ಗಾಯಗಳು ಗುಣವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ವೈದ್ಯರು ಹೇಳಿದ್ದಾರೆ. ಆದ್ದರಿಂದ ನಟನಿಗೆ ಸುಮಾರು ಒಂದು ವಾರದವರೆಗೆ ಓಡಾಡದೇ ಇರಲು ವೈದ್ಯರು ಸೂಚಿಸಿದ್ದಾರೆ.
ನಟ ಪ್ರಸ್ತುತ ವೀಕ್ಷಣೆಯಲ್ಲಿದ್ದು ಮತ್ತು ಅವರ ಚೇತರಿಕೆಯನ್ನು ಅವಲಂಬಿಸಿ ಮುಂದಿನ ಎರಡು ಮೂರು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಖಾನ್ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು ಅವರ ಬೆನ್ನಿನಿಂದ 2.5 ಇಂಚಿನ ಚಾಕುವಿನ ತುಂಡನ್ನು ಹೊರ ತೆಗೆದಿದ್ದಾರೆ. ಅವರನ್ನು ಮೇಲ್ವಿಚಾರಣೆಗಾಗಿ ಐಸಿಯುಗೆ ಸ್ಥಳಾಂತರಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಶೀಘ್ರದಲ್ಲೇ ವಿಶೇಷ ಕೋಣೆಗೆ ಸ್ಥಳಾಂತರಿಸಲಾಗುವುದು ಅಲ್ಲಿ ಮುಂಬೈ ಪೊಲೀಸರು ಅವರ ಹೇಳಿಕೆಯನ್ನು ದಾಖಲಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.