ಬಾಲಿವುಡ್ ನಟ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಲಾಗಿದೆ.
ಜನವರಿ 16 ರಂದು ಚಾಕು ಇರಿತಕ್ಕೊಳಗಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿ ಖಾನ್ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದರು.
ಆಪರೇಷನ್ ಮಾಡಿದ ವೈದ್ಯರು ಬೆನ್ನುಹುರಿಯಲ್ಲಿ ಸಿಲುಕಿದ್ದ ಚಾಕುವಿನ ತುಂಡನ್ನು ತೆಗೆದಿದ್ದರು. ನಂತರ ಸೈಫ್ ಅಲಿ ಖಾನ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಐಸಿಯುನಿಂದ ವಾರ್ಡ್ ಗೆ ಶಿಫ್ಟ್ ಮಾಡಲಾಗಿತ್ತು. ಅವರ ಚೇತರಿಕೆಯ ಪ್ರಗತಿಯನ್ನು ಪರಿಶೀಲಿಸುತ್ತಿದ್ದ ವೈದ್ಯರು ಇಂದು ಸೈಫ್ ಅಲಿ ಖಾನ್ ರನ್ನು ಡಿಸ್ಚಾರ್ಜ್ ಮಾಡಲಿದ್ದಾರೆ.