ಇಸ್ಲಾಮಾಬಾದ್ : ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಶುಕ್ರವಾರ ಪೊಲೀಸ್ ಮೊಬೈಲ್ ವ್ಯಾನ್ ಅನ್ನು ಗುರಿಯಾಗಿಸಿಕೊಂಡು ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋರಿಕ್ಷಾದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಐದು ಮಕ್ಕಳು ಸೇರಿದಂತೆ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಾಯಗೊಂಡಿದ್ದಾರೆ.
ಪ್ರಾಂತ್ಯದ ಮಸ್ತುಂಗ್ ಜಿಲ್ಲೆಯ ಸಿವಿಲ್ ಆಸ್ಪತ್ರೆ ಚೌಕ್ನಲ್ಲಿರುವ ಬಾಲಕಿಯರ ಪ್ರೌಢಶಾಲೆಯ ಬಳಿ ನಿನ್ನೆ ಬೆಳಿಗ್ಗೆ 8.35 ಕ್ಕೆ ಸ್ಫೋಟ ಸಂಭವಿಸಿದೆ.
ಸ್ಫೋಟದ ನಂತರ ಐದು ಶಾಲಾ ಮಕ್ಕಳು ಸೇರಿದಂತೆ ಏಳು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಗಾಯಗೊಂಡವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಮಸ್ತುಂಗ್ ಜಿಲ್ಲಾ ಪೊಲೀಸ್ ಅಧಿಕಾರಿ (ಡಿಪಿಒ) ಮಿಯಾಂದಾದ್ ಉಮ್ರಾನಿ ದೃಢಪಡಿಸಿದ್ದಾರೆ.”ಗಾಯಗೊಂಡವರ ಸಂಖ್ಯೆ ಸುಮಾರು 27 ಮತ್ತು ಕೆಲವು ನಾಗರಿಕರು ಗಾಯಗೊಂಡವರಲ್ಲಿ ಕೆಲವರನ್ನು ಆಸ್ಪತ್ರೆಗಳಿಗೆ ಕರೆದೊಯ್ದಿದ್ದಾರೆ” ಎಂದು ಅವರು ಹೇಳಿದರು.