ಬೆಂಗಳೂರು : ಬೆಂಗಳೂರು ಸೇರಿ ದೇಶದ 20ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಎಫ್‌ಐಆರ್ ದಾಖಲಾಗಿದೆ.
ನಿನ್ನೆ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿತ್ತು. ಮ್ಯೂಸಿಯಂನಲ್ಲಿ ಹಲವು ಸ್ಪೋಟಕಗಳನ್ನ ಇರಿಸಲಾಗಿದೆ, ಬೆಳಗ್ಗೆ ಎಲ್ಲವೂ ಸ್ಪೋಟಗೊಳ್ಳುತ್ತವೆ ಎಂದು ‘Morgue999lol’ ಎಂಬ ಇ ಮೇಲ್ ಐಡಿ ಮೂಲಕ ಮೇಲ್ ಬಂದಿತ್ತು. (Terrorizers 111) ಎಂಬ ಉಗ್ರ ಸಂಘಟನೆ ಹೆಸರನ್ನು ಉಲ್ಲೇಖಿಸಿ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ನಡೆಸಿದ ಪೊಲೀಸರಿಗೆ ಇದು ಹುಸಿ ಬಾಂಬ್ ಬೆದರಿಕೆ ಎಂಬುದು ತಿಳಿಯಿತು. ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಹಾಕಿದ ಬೆನ್ನಲ್ಲೇ ಪೊಲೀಸರು ಪರಿಶೀಲನೆ ನಡೆಸಿ ಕಿಡಿಗೇಡಿ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ಕೇವಲ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಬಂದಿದ್ದು ಮಾತ್ರವಲ್ಲ, ರಾಜ್ಯದ 20 ಕ್ಕೂ ಹೆಚ್ಚು ಮ್ಯೂಸಿಯಂಗಳಿಗೆ ಬೆದರಿಕೆ ಇ ಮೇಲ್ ಬಂದಿದೆ. ವಿಶ್ವೇಶ್ವರಯ್ಯ ಮ್ಯೂಸಿಯಂ, ನೆಹರು ತಾರಾಲಯ, ನ್ಯಾಷನಲ್ ಗ್ಯಾಲರಿ ಅಫ್ ಮಾರ್ಡನ್ ಆರ್ಟ್ ಸೇರಿ ನಗರದ ಮೂರು ಮ್ಯೂಸಿಯಂಗೆ ಬೆದರಿಕೆ ಇಮೇಲ್ ಬಂದಿದೆ. ಇದಲ್ಲದೆ ಇತರೆ ರಾಜ್ಯಗಳ ಇಪ್ಪತ್ತಕ್ಕೂ ಹೆಚ್ಚು ಮ್ಯೂಸಿಯಂ ಗಳಿಗೆ ಇದೇ ರೀತಿ ಇ ಮೇಲ್ ಬೆದರಿಕೆ ಬಂದಿದೆ ಎಂಬ ಸ್ಪೋಟಕ ಮಾಹಿತಿ ಲಭ್ಯವಾಗಿದೆ.