ಬೆಂಗಳೂರು : ಬೆಂಗಳೂರಿನ 28 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಇಲ್ಲೇ ಕುಳಿತು ಬೇರೆ ದೇಶದಿಂದ ಇಮೇಲ್ ಕಳುಹಿಸಿದ್ದಾರೆ. ವರ್ಚುವಲ್ ಪ್ರೈವೇಟ್ ನೆಟ್ ವರ್ಕ್ ಮೂಲಕ ಇಮೇಲ್ ಬೆದರಿಕೆ ಕಳುಹಿಸಿದ್ದಾರೆ. ಶಾಲಾ ಮೈದಾನದಲ್ಲಿ ಸ್ಪೋಟಕಗಳನ್ನು ಇಟ್ಟಿದ್ದೇವೆ ಎಂದು ಕಿಡಿಗೇಡಿಗಳು ಬೆದರಿಕೆಯೊಡ್ಡಿದ್ದಾರೆ, ಎಲ್ಲಾ ಶಾಲೆಗಳಲ್ಲಿ ಬಾಂಬ್ ಪತ್ತೆ ದಳ ಹಾಗೂ ನಿಷ್ಕ್ರಿಯ ದಳ ತಪಾಸಣೆ ನಡೆಸುತ್ತಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಮಾಹಿತಿ ನೀಡಿದ್ದಾರೆ.
ಇ- ಮೇಲ್ ಮೂಲಕ ಬಸವೇಶ್ವರ ನಗರದ ನ್ಯಾಪಲ್, ವಿದ್ಯಾಶಿಲ್ಪ ಸೇರಿದಂತೆ 28 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದಾರೆ. ಬೆದರಿಕೆ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಶಾಲೆಯ ಬಳಿ ಓಡಿ ಬಂದಿದ್ದಾರೆ.