alex Certify BIG UPDATE : ‘ಕೋವಿಡ್’ ನಿಯಂತ್ರಣಕ್ಕೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಭೆ : ಹೀಗಿದೆ ಹೈಲೆಟ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ‘ಕೋವಿಡ್’ ನಿಯಂತ್ರಣಕ್ಕೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಸಂಪುಟ ಉಪ ಸಮಿತಿ ಸಭೆ : ಹೀಗಿದೆ ಹೈಲೆಟ್ಸ್

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮ, ಚಿಕಿತ್ಸಾ ಸಿದ್ದತೆ ಕುರಿತು ಆಸ್ಪತ್ರೆಗಳಿಗೆ ಮಾರ್ಗಸೂಚಿ ಸಿದ್ಧಪಡಿಸಲು ಸಚಿವ ದಿನೇಶ್ ‍ಗುಂಡೂರಾವ್ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಉಪ ಸಮಿತಿಯ ಮೊದಲ ಸಭೆ ನಡೆದಿದೆ.

ಸಭೆಯ ಪ್ರಮುಖ ಅಂಶಗಳು

• ಮಕ್ಕಳಲ್ಲಿ ವೇಗವಾಗಿ ರೋಗ ಹರಡುವ ಸಾಧ್ಯತೆ ಇರುವುದರಿಂದ ಜ್ವರ, ನೆಗಡಿ ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬಾರದು. ಮನೆಯಲ್ಲೇ ಸೂಕ್ತ ಆರೈಕೆ ಮಾಡಬೇಕು.ಕೇಂದ್ರದಿಂದ 30,000 ಕೋವಿಡ್ ಲಸಿಕೆ ಪಡೆದುಕೊಳ್ಳಲು ನಿರ್ಧರಿಸಲಾಗಿದೆ.

• ಕೋವಿಡ್ ಪಾಸಿಟಿವ್ ಆದವರು ಕಡ್ಡಾಯವಾಗಿ ಒಂದು ವಾರಗಳ ಕಾಲ ʻಹೋಮ್ ಐಸೊಲೇಷನ್ʼನಲ್ಲಿ (ಮನೆಯಲ್ಲಿ ಪ್ರತ್ಯೇಕವಾಗಿ ) ಇರಬೇಕು. ʻಹೋಮ್ ಐಸೊಲೇಷನ್ʼನಲ್ಲಿ ಇರುವ ಸರ್ಕಾರಿ ಅಥವಾ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ಒಂದು ವಾರಗಳ ರಜೆ ಹಾಗೂ ಐಸಿಯು ಅಥವಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೋವಿಡ್ ಬಾಧಿತರಿಗೆ ಸಂಪೂರ್ಣ ಗುಣಮುಖರಾಗುವರೆಗೆ ರಜೆ ಕೊಡಿಸುವ ಕುರಿತು ಸದ್ಯದಲ್ಲೇ ಮಾರ್ಗಸೂಚಿಯನ್ನು ಹೊರಡಿಸಲಾಗುವುದು.

• ರಾಜ್ಯದಲ್ಲಿ ಕೋವಿಡ್ 436 ಸಕ್ರಿಯ ಪ್ರಕರಣಗಳಿವೆ. ಈ ಪೈಕಿ 400 ಜನ ಮನೆಯಲ್ಲಿ ಐಸೋಲೇಷನಲ್ಲಿದ್ದಾರೆ. ಇವರ ಮೇಲೆ ನಮ್ಮ ವೈದ್ಯರು ನಿಗಾ ವಹಿಸಲಿದ್ದು, ಮನೆಗಳಿಗೆ ಭೇಟಿ ಮಾಡಿ ತಪಾಸಣೆ ನಡೆಸಲಿದ್ದಾರೆ. ಅಗತ್ಯವೆನಿಸಿದರೆ ರೋಗಿಗಳ ಪ್ರಾಥಮಿಕ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ತಪಾಸಣೆ ನಡೆಸಲಿದ್ದಾರೆ.

• ಆರೋಗ್ಯ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಫ್ಲೂ ವ್ಯಾಕ್ಸಿನ್ ನೀಡಲು ನಿರ್ಧರಿಸಲಾಗಿದೆ.ಹೊಸ ವರ್ಷಾಚರಣೆಗೆ ಸೇರಿದಂತೆ ಯಾವುದೇ ಕಾರ್ಯಕ್ರಮ ಅಥವಾ ಜನರ ಓಡಾಟಕ್ಕೆ ಸದ್ಯ ಯಾವುದೇ ನಿರ್ಬಂಧ ಹೇರುವುದಿಲ್ಲ. ಜನನಿಬಿಡ ಪ್ರದೇಶದಲ್ಲಿ ಮಾಸ್ಕ್ ಧರಿಸಿ ಕೋವಿಡ್ ನಿಯಮಾವಳಿ ಪಾಲನೆ ಮಾಡುವಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ ಎಂದರು.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...