ಬೆಂಗಳೂರು : ಇಂದಿರಾನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟಕ್ಕೆ ಒಂದೇ ಕಂಪನಿಯ ಐವರು ಸಹದ್ಯೋಗಿಗಳು ಗಾಯಗೊಂಡಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ಊಟ ಮಾಡಲೆಂದು ಮೈಕ್ರೋ ಚಿಪ್ ಕಂಪನಿಯ ಉದ್ಯೋಗಿಗಳು ತೆರಳಿದ್ದಾರೆ. ಈ ವೇಳೆ ಭೀಕರ ಸ್ಪೋಟ ಸಂಭವಿಸಿದೆ. ಘಟನೆಯಲ್ಲಿ ಐವರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಸ್ವರ್ಣ ನಾರಾಯಣಪ್ಪ, ಫಾರೂಕ್ ಹುಸೇನ್, ದೀಪಾಂಶು ಸೇರಿದಂತೆ ಐವರು ಗಾಯಗೊಂಡಿದ್ದು, ಸ್ವರ್ಣ ನಾರಾಯಣಪ್ಪಗೆ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬ್ರೂಕ್ ಫೀಲ್ಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರಿಗೆ ಜನರಲ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ. ಮತ್ತಿಬ್ಬರು ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಇಂದು ಮಧ್ಯಾಹ್ನ ಏಕಾಏಕಿ ಭೀಕರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಓರ್ವ ಮಹಿಳೆ ಸೇರಿದಂತೆ ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಪೋಟ ಸಂಭವಿಸಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳಗಳಿಂದ ಪರಿಶೀಲನೆ ನಡೆಸಲಾಗುತ್ತಿದೆ.