
ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯದ ಪ್ರೇಮ್ ನಟನೆಯ ಬಹು ನಿರೀಕ್ಷಿತ ‘ಕೇಡಿ’ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇನ್ನೇನು ಅಕ್ಟೋಬರ್ ತಿಂಗಳಲ್ಲಿ ತೆರೆ ಮೇಲೆ ಬರಲಿದೆ. ಮೇ 26ಕ್ಕೆ ಚಿತ್ರ ತಂಡ ಧ್ರುವ ಸರ್ಜಾ ಅಭಿಮಾನಿಗಳಿಗಾಗಿ ಬಿಗ್ ಅಪ್ಡೇಟ್ ಒಂದನ್ನು ನೀಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದೆ.
ಈ ಚಿತ್ರವನ್ನು K.V.N. ಪ್ರೊಡಕ್ಷನ್ ಬ್ಯಾನರ್ ನಲ್ಲಿ ಸುಪ್ರೀತ್ ನಿರ್ಮಾಣ ಮಾಡಿದ್ದು, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಗೆ ಜೋಡಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದಾರೆ. ಇನ್ನುಳಿದಂತೆ ಶಿಲ್ಪ ಶೆಟ್ಟಿ, ರಮೇಶ್ ಅರವಿಂದ್, ರವಿಚಂದ್ರನ್, ಸಂಜಯ್ ದತ್, ನೋರಾ ಫತೇಯಿ ತೆರೆ ಹಂಚಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿದ್ದು, ಶ್ರೀನಿವಾಸ್ ಪ್ರಭು ಸಂಕಲನ, ವಿಲಿಯಂ ಡೇವಿಡ್ ಛಾಯಾಗ್ರಹಣವಿದೆ.
