ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜೂನ್ ಹಾಗೂ ಜುಲೈ ತಿಂಗಳ ಗೃಹಲಕ್ಷ್ಮಿ ಹಣ ಯಜಮಾನಿಯರ ಖಾತೆಗೆ ಜಮಾ ಆಗಿದೆ.
ಗೃಹಲಕ್ಷ್ಮಿ ಹಣ ಜಮಾ ಆಗಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಕೆಲವರು 1 ತಿಂಗಳ ಹಣ ಬಂದಿದೆ. ಇನ್ನೂ ಕೆಲವರು ನಮಗೆ 2 ತಿಂಗಳ ಹಣ ಬಂದಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಣ ಬಂದ ಎಸ್ ಎಮ್ ಎಸ್ ನ ಸ್ಕ್ರೀನ್ ಶಾಟ್ ಹಂಚಿಕೊಳ್ಳುತ್ತಿದ್ದಾರೆ.
ಎಲ್ಲ ಫಲಾನುಭವಿಗಳ ಖಾತೆಗೆ ಇಂದಿನಿಂದ ಹಣ ಜಮೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಿನ್ನೆ ಹೇಳಿದ್ದರು.
ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ್ದಂತಹ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಾಂತ್ರಿಕ ದೋಷದಿಂದ ಕಳೆದ 2 ತಿಂಗಳಿಂದ ಹಣ ಬಂದಿಲ್ಲ ಎಂದು ನಮಗೆ ಕೆಲವರು ದೂರು ನೀಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಕೆಲವರ ಖಾತೆಗೆ ಹಣ ಜಮೆಯಾಗಿಲ್ಲ. ಇಂದಿನಿಂದ ಎಲ್ಲ ಫಲಾನುಭವಿಗಳ ಖಾತೆಗೂ ಹಣ ಜಮೆಯಾಗಲಿದೆ ಎಂದು ಹೇಳಿದ್ದರು.
ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 2000 ಹಣ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯು ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದಿರುವ ಯೋಜನೆಯಾಗಿದೆ. ಜೂನ್ ಮತ್ತು ಜುಲೈತಿಂಗಳ 2 ತಿಂಗಳ ಕಂತಿನ ಹಣವನ್ನು ಒಟ್ಟಿಗೆ ಇದೇ ಆಗಸ್ಟ್ ಮೊದಲ ವಾರದಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.ಇನ್ಮುಂದೆ ಪ್ರತಿ ತಿಂಗಳು 15 ರೊಳಗೆ ಗೃಹಲಕ್ಷ್ಮಿ ಹಣ ಜಮಾ ಆಗಲಿದೆ ,ಚಿಂತೆ ಬೇಡ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇತ್ತೀಚೆಗೆ ಹೇಳಿದ್ದರು.