alex Certify BIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೇರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಮೆಕ್ಕೆಜೋಳ ಗೋದಾಮಿನಲ್ಲಿ ಘೋರ ದುರಂತ : ಮೃತಪಟ್ಟ ಕಾರ್ಮಿಕರ ಸಂಖ್ಯೆ 7 ಕ್ಕೇರಿಕೆ

ವಿಜಯಪುರ : ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ  ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು ಇಂಡಸ್ಟ್ರಿಸ್ ನಲ್ಲಿ ಸೋಮವಾರ ಸಂಜೆ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 7 ಕ್ಕೇರಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 8 ಮಂದಿ ಸಿಲುಕಿದ್ದರು. ಅದರಲ್ಲಿ ಒಬ್ಬರನ್ನು ನಿನ್ನೆ ರಕ್ಷಿಸಲಾಗಿದೆ. ಆದರೆ 7 ಮಂದಿ ಪ್ರಾಣ ಕಳೆದುಕೊಂಡಿದ್ದು, ಏಳು ಮಂದಿ ಶವವನ್ನು ಹೊರಕ್ಕೆ ತರಲಾಗಿದೆ.

ದುರಂತದಲ್ಲಿ ಮೃತಪಟ್ಟವರು ಬಿಹಾರ ಮೂಲದ ಕಾರ್ಮಿಕರಾಗಿದ್ದಾರೆ. ಅವಶೇಷಗಳಡಿ ಸಿಲುಕಿ 7 ಜನ ಸಾವನ್ನಪ್ಪಿದ್ದಾರೆ. ರಾಜಗುರು ಫುಡ್ಸ್ ಗೋದಾಮಿನಲ್ಲಿ ಮೆಕ್ಕೆಜೋಳ ಚೀಲಗಳ ರಾಶಿ ಕುಸಿದು ದುರಂತ ಸಂಭವಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...