ಬೆಂಗಳೂರು : ಕರ್ನಾಟಕ ಬಂದ್ ಬಗ್ಗೆ ನಾಳೆ ಮಹತ್ವದ ಸಭೆ ನಿಗದಿಯಾಗಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ವಾಟಾಳ್ ನಾಗರಾಜ್ ಸೆ.29 ಕ್ಕೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಬಗ್ಗೆ ನಾಳೆ ಮತ್ತೊಂದು ಸುತ್ತಿನ ಸಭೆ ನಡೆಯಲಿದೆ.ಬಳಿಕ ಅಧಿಕೃತವಾಗಿ ಘೋಷಣೆ ಮಾಡಲಾಗುತ್ತದೆ ಎಂದರು.
ಇದರಲ್ಲಿ ವಿವಿಧ ಕನ್ನಡಪರ ಸಂಘಟನೆಗಳು ಭಾಗಿಯಾಗಲಿದೆ. ಸಭೆಯಲ್ಲಿ ಕರ್ನಾಟಕ ಬಂದ್ ನ ರೂಪು ರೇಷೆ, ಹೋರಾಟದ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ನಾಳೆ ಕರ್ನಾಟಕ ಬಂದ್ ಬಗ್ಗೆ ಸ್ಪಷ್ಟ ಮಾಹಿತಿ ಹೊರಬೀಳಲಿದೆ ಎಂದಿದ್ದಾರೆ.
ಇನ್ನೂ. ಕಾವೇರಿ ನೀರಿಗಾಗಿ ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ಸೆ.26ರಂದು ಕರೆ ನೀಡಿರುವ ಬೆಂಗಳೂರು ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದರ ನಡುವೆ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.
ಇನ್ನೂ. ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಖಂಡಿಸಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಕಾವೇರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಬಂದ್ ಇರಲಿದೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗಲಿವೆ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಗಳ ಒಕ್ಕೂಟ ಸೆ.26ರ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದೆ.