ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 23,708 ಕ್ಕೆ ಏರಿದೆ ಎಂದು ಗಾಝಾ ಮೂಲದ ಆರೋಗ್ಯ ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ಸೇನೆಯು 151 ಫೆಲೆಸ್ತೀನೀಯರನ್ನು ಕೊಂದಿದೆ ಮತ್ತು 248 ಜನರನ್ನು ಗಾಯಗೊಳಿಸಿದೆ ಎಂದು ಸಚಿವಾಲಯ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.
ಅಕ್ಟೋಬರ್ 7 ರಂದು ಇಸ್ರೇಲ್-ಹಮಾಸ್ ಸಂಘರ್ಷ ಪ್ರಾರಂಭವಾದಾಗಿನಿಂದ, ಇಸ್ರೇಲಿ ದಾಳಿಯ ಪರಿಣಾಮವಾಗಿ 60,005 ಫೆಲೆಸ್ತೀನೀಯರು ಗಾಯಗೊಂಡಿದ್ದಾರೆ, ಹೆಚ್ಚಿನ ಸಂಖ್ಯೆಯ ಜನರು ಇನ್ನೂ ಅವಶೇಷಗಳ ಅಡಿಯಲ್ಲಿದ್ದಾರೆ ಮತ್ತು ಆಂಬ್ಯುಲೆನ್ಸ್ ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿ ಅವರನ್ನು ರಕ್ಷಿಸಲು ಸಾಧ್ಯವಾಗಿಲ್ಲ ಎಂದು ಹೇಳಿದೆ.ಇದರ ನಡುವೆ ಗಾಜಾ ಪಟ್ಟಿಯ ದಕ್ಷಿಣದಲ್ಲಿರುವ ಖಾನ್ ಯೂನಿಸ್ ಮತ್ತು ಕೇಂದ್ರ ಗಾಜಾ ಪಟ್ಟಿಯ ಅಲ್-ಮಘಾಜಿ ನಿರಾಶ್ರಿತರ ಶಿಬಿರದಲ್ಲಿ ಘರ್ಷಣೆಗಳು ಮುಂದುವರೆದಿವೆ ಎಂದು ಮೂಲಗಳು ತಿಳಿಸಿವೆ.