ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಶನಿವಾರ ರಾತ್ರಿ ನಿರ್ಮಾಣ ಹಂತದಲ್ಲಿದ್ದ ಸುರಂಗ ಕುಸಿದ ಪರಿಣಾಮ ಹಲವಾರು ಕಾರ್ಮಿಕರು ಸುರಂಗದೊಳಗೆ ಸಿಲುಕಿದ್ದರು. ಘಟನೆ ನಡೆದು 30 ಗಂಟೆ ನಡೆದಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿದೆ.
ಸುರಂಗದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಯುತ್ತಿದ್ದು, 40 ಕಾರ್ಮಿಕರ ಜತೆ ಸಂಪರ್ಕ ಸಾಧಿಸಲಾಗಿದೆ. ನಾವೆಲ್ಲರೂ ಸುರಕ್ಷಿತವಾಗಿದ್ದೇವೆ ಎಂದು ಕಾರ್ಮಿಕರು ನಮಾಹಿತಿ ನೀಡಿದ್ದಾರೆ. ಸದ್ಯ ಅವರನ್ನು ರಕ್ಷಣೆ ಮಾಡಲು ನಾವು ಹೋಗುತ್ತಿದ್ದು, ಇನ್ನೂ 35 ಮೀಟರ್ ಕೊರೆದು, ಒಳಗೆ ಹೋಗಿ ಕಾರ್ಮಿಕರನ್ನು ರಕ್ಷಿಸುತ್ತೇವೆ.ಅವರಿಗೆ ನೀರು, ಆಮ್ಲಜನಕ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೂಲಗಳ ಪ್ರಕಾರ 50-60 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗಿದೆ. ಬ್ರಹ್ಮಖಲ್-ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲ್ಕ್ಯಾರಾದಿಂದ ದಂಡಲ್ಗಾಂವ್ಗೆ ಸಂಪರ್ಕಿಸುವ ಸುರಂಗದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.