alex Certify BIG UPDATE : ಸಚಿವ ಜಮೀರ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಸಚಿವ ಜಮೀರ್ ಆರೋಗ್ಯದಲ್ಲಿ ಚೇತರಿಕೆ, ಆಸ್ಪತ್ರೆಯಿಂದ ಡಿಸ್ಚಾರ್ಜ್.!

ಚಿತ್ರದುರ್ಗ : ಎದೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಜಮೀರ್ ಅಹಮದ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬೆಳಗ್ಗೆ ವಡೆ ತಿಂದ ಕಾರಣಕ್ಕೆ ಗ್ಯಾಸ್ಟ್ರಿಕ್ ಆಗಿದ್ದು, ಈ ಹಿನ್ನೆಲೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ನಂತರ ಸಚಿವ ಜಮೀರ್ ಅಹಮ್ಮದ್ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು, ಇದೀಗ ಸಚಿವ ಜಮೀರ್ ಅಹಮದ್ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಚಿತ್ರದುರ್ಗ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ ಪ್ರಚಾರಕ್ಕೆ ಸಚಿವರು ಇಂದು ಜಿಲ್ಲೆಗೆ ಆಗಮಿಸಿದ್ದರು. ಪ್ರಚಾರ ನಡೆಸುತ್ತಿದ್ದ ಸಂದರ್ಭದಲ್ಲಿ ಅವರಿಗೆ ಧಿಡೀರ್ ಆಗಿ ಎದೆನೋವು ಕಾಣಿಸಿಕೊಂಡಿತ್ತು. ನಂತರ ಸಚಿವ ಜಮೀರ್ ಅವರಿಗೆ ತುರ್ತುಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...