alex Certify BIG UPDATE : ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG UPDATE : ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು

ಬೆಂಗಳೂರಿನ 15 ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ದೌಡು
ಬೆಂಗಳೂರು : ಬೆಂಗಳೂರಿನಲ್ಲಿ 15 ಕ್ಕೂ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಆತಂಕದಿಂದ ಪೋಷಕರು ಶಾಲೆಗಳಿಗೆ ಬಂದು ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದು, ಕಳೆದ ವರ್ಷ ಇದೇ ರೀತಿ 30 ಇಮೇಲ್ ಬಂದಿತ್ತು, ಇದೀಗ ಮತ್ತೆ 15 ಶಾಲೆಗಳಿಗೆ ಕರೆ ಬಂದಿದೆ. ಈಗಾಗಲೇ ಬಾಂಬ್ ಪತ್ತೆ ಹಾಗೂ ನಿಷ್ಕ್ರಿಯ ದಳದ ಸಿಬ್ಬಂದಿ , ಪೊಲೀಸರು ಶಾಲೆಗಳಿಗೆ ದೌಡಾಯಿಸಿ ತಪಾಸಣೆ ನಡೆಸುತ್ತಿದ್ದಾರೆ.ಶಾಲೆಯ ಶೌಚಾಲಯ, ಕೊಠಡಿ, ತರಗತಿ, ಸ್ಟಾಫ್ ರೂಮ್ ಸೇರಿದಂತೆ ಎಲ್ಲಾ ಕಡೆ ತೀವ್ರ ತಪಾಸಣೆ ನಡೆಸಲಾಗುತ್ತಿದೆ.  ಇದು ಹುಸಿ ಬೆದರಿಕೆಯಾಗಿದೆ. ಪೋಷಕರು ಆತಂಕ ಪಡುವ ಅಗತ್ಯ ಇಲ್ಲ ಎಂದು ಅವರು ಹೇಳಿದರು.

ಇಮೇಲ್ ಮೂಲಕ ಕಿಡಿಗೇಡಿಗಳು ಬೆಂಗಳೂರು ನಗರದ ನ್ಯಾಪಲ್, ವಿದ್ಯಾಶಿಲ್ಪ, ಬಸವೇಶ್ವರನಗರ, ಯಲಹಂಕ ಸೇರಿದಂತೆ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆಯೊಡ್ಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...