ಬೆಂಗಳೂರು : ಬೆಂಗಳೂರು ಸೇರಿ ದೇಶಾದ್ಯಂತ 41 ಕಡೆ ಎನ್ ಐ ಎ ದಾಳಿ ನಡೆಸಿ ಹಲವರನ್ನು ವಶಕ್ಕೆ ಪಡೆದಿದೆ.
ಉಗ್ರ ಸಂಘಟನೆ ಐಸಿಸ್ ಜೊತೆ ಸಂಪರ್ಕ ಶಂಕೆ ಹಿನ್ನೆಲೆ ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್ಐಎ ಇಂದು ಬೆಂಗಳೂರು ಸೇರಿದಂತೆ ದೇಶಾದ್ಯಂತ ಹಲವು ಕಡೆ ದಾಳಿ ನಡೆಸಿದೆ.
ದಾಳಿಯ ಸಮಯದಲ್ಲಿ, NIA ದೊಡ್ಡ ಪ್ರಮಾಣದ ಲೆಕ್ಕಕ್ಕೆ ಬಾರದ ನಗದು, ಶಸ್ತ್ರಾಸ್ತ್ರಗಳು, ಚೂಪಾದ ಉಪಕರಣಗಳು, ಸೂಕ್ಷ್ಮ ದಾಖಲೆಗಳು ಮತ್ತು ವಿವಿಧ ಡಿಜಿಟಲ್ ಸಾಧನಗಳನ್ನು ವಶಪಡಿಸಿಕೊಂಡಿದೆ. ಕರ್ನಾಟಕ, ಜಾರ್ಖಂಡ್ನ , ಮಹಾರಾಷ್ಟ್ರದ ಮತ್ತು ದೆಹಲಿ ಸೇರಿದಂತೆ ಹಲವು ಕಡೆ ದಾಳಿ ನಡೆಸಿದೆ.
ಡಿಸೆಂಬರ್ 9 ರಂದು ಪುಲಿಕೇಶಿನಗರದಲ್ಲಿರುವ ಮೋರ್ ರಸ್ತೆಯ ಅಲಿ ಅಬ್ಬಾಸ್ ಫ್ಲಾಟ್ ಮೇಲೆ ದಾಳಿ ನಡೆಸಿದ್ದ ಎನ್ಐಎ 16 ಲಕ್ಷಕ್ಕೂ ಹೆಚ್ಚು ನಗದು ಹಾಗೂ ಲ್ಯಾಪ್ ಟಾಪ್, ಪೆನ್ ಡ್ರೈವ್ ಜಪ್ತಿ ಮಾಡಿದ್ದರು. ಈ ವೇಳೆ ಮಹತ್ವದ ಮಾಹಿತಿ ಕಲೆ ಹಾಕಿದ್ದ ಎನ್ಐಎ ಅಧಿಕಾರಿಗಳು, ಇಂದು ಮತ್ತೆ ನಗರದ ಹಲವೆಡೆ ದಾಳಿ ನಡೆಸಿದ್ದಾರೆ.
ಐಎಸ್ ಸಂಘಟನೆ ಜೊತೆ ನಂಟು ಹೊಂದಿ ಯುವಕರನ್ನು ಪ್ರಚೋದಿಸುತ್ತಿದ್ದ ಆರೋಪದಡಿ ಮುಂಬೈ ಮೂಲದ ಶಂಕಿತ ಉಗ್ರ ಅಲಿ ಅಬ್ಬಾಸ್ ಮನೆ ಮೇಲೆ ಎನ್ಐಎ ದಾಳಿ ನಡೆಸಿ ಬಂಧಿಸಿದ್ದರು. ಈ ಬೆನ್ನಲ್ಲೇ ಅಲರ್ಟ್ ಆದ ಎನ್ ಐ ಎ ದೇಶದ ಹಲವು ಕಡೆ ಮಿಂಚಿನ ದಾಳಿ ನಡೆಸಿದೆ.